ವಿಜಯಪುರ: ಇಟ್ಟಂಗಿಹಾಳದಲ್ಲಿರುವ ವೇದ ಅಕಾಡೆಮಿಯಲ್ಲಿ ಅಪ್ಪಂದಿರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಚಿಣ್ಣರು ತಮ್ಮ ತಂದೆಗೆ ಭಕ್ತಿಭಾವದಿಂದ ಪಾದಪೂಜೆ ನೆರವೇರಿಸಿ ನಮಸ್ಕರಿಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ‘ಬದಲಾಗುತ್ತಿರುವ ಇಂದಿನ ಆಧುನಿಕ ಸಮಾಜದಲ್ಲಿ ಒಳ್ಳೆಯ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಶಾಲೆಯಲ್ಲಿಯೇ ಮಕ್ಕಳಿಗೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.

‘ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಕೆಯು ಮಕ್ಕಳಲ್ಲಿ ಆಧುನಿಕತೆಯ ಜೊತೆಗೆ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಲು ಅನುವು ಮಾಡಿಕೊಡುವುದರ ಜೊತೆಗೆ ಒಬ್ಬ ತಾಯಿ ಮನೆಯಲ್ಲಿ ಮಗುವಿಗೆ ಸಂಸ್ಕಾರ ಕೊಟ್ಟರೆ ತಂದೆಯು ಆ ಮಗುವಿಗೆ ಸಮಾಜದಲ್ಲಿ ಹೇಗಿರಬೇಕೆಂಬ ಸಂಸ್ಕಾರವನ್ನು ಕೊಡುತ್ತಾನೆ’ ಎಂದರು.

ಸಂಸ್ಥೆಯ ಅಧ್ಯಕ್ಷ ಶಿವಾನಂದ ಕೆಲೂರ ಮಾತನಾಡಿ, ‘ಮಕ್ಕಳ ಆಸಕ್ತಿಯನ್ನು ಗಮನಿಸಿ ಅದೇ ಕ್ಷೇತ್ರದಲ್ಲಿ ಅವರನ್ನು ಪ್ರೋತ್ಸಾಹಿಸಿದರೆ ಅಂದುಕೊಂಡ ಗುರಿಯನ್ನು ತಲುಪಲು ಮಕ್ಕಳಿಗೆ ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.

ವಿರೇಶ ವಾಲಿ ಮಾತನಾಡಿದರು. ಪ್ರಾಂಶುಪಾಲ ಮಧ್ವಪ್ರಸಾದ ಜಿ. ಕೆ, ಸಂಸ್ಥೆಯ ಕಾರ್ಯದರ್ಶಿ ಎನ್.ಜಿ. ಯರನಾಳ, ರಶ್ಮಿ ಕವಟಗಿಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.