ತಿಕೋಟಾ: ತಾಲ್ಲೂಕಿನ ತೊರವಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೋಮವಾರ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ ನೀಡಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಗ್ರಾಮ ಪಂಚಾಯಿತಿ ಆವರಣವನ್ನು ವೀಕ್ಷಿಸಿ, ಸಿಬ್ಬಂದಿಗಳೊಡನೆ ಚರ್ಚೆ ನಡೆಸಿದರು. ನಂತರ ಸಿಬ್ಬಂದಿಗೆ ಕರ ವಸೂಲಾತಿ, ಮನರೇಗಾ ಕೂಲಿಕಾರರ ಇಕೆವೈಸಿ ಸೇರಿದಂತೆ ಇತರೆ ವಿಷಯಗಳಲ್ಲಿ ಗ್ರಾಮ ಪಂಚಾಯಿತಿಯ ಎಲ್ಲಾ ಸಿಬ್ಬಂದಿಗೆ ಕೆಲಸ ಹಂಚಿಕೆ ಮಾಡಿ ಶೀಘ್ರಗತಿಯಲ್ಲಿ ಪ್ರಗತಿ ಸಾಧಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಶಿಷ್ಟ ಜಾತಿಯ ಜನರಿಗಾಗಿ ಮೀಸಲಿಟ್ಟ ಸ್ಮಶಾನ ಜಾಗದ ಒತ್ತುವರಿ ತೆರವುಗೊಳಿಸಿ ಗ್ರಾಮ ಪಂಚಾಯಿತಿಯಿಂದ ತಂತಿ ಬೇಲಿ ಅಳವಡಿಸಿರುವುದನ್ನು ಪರಿಶೀಲನೆ ಮಾಡಿದರು. ರಸ್ತೆ ವಿಸ್ತರಣದಲ್ಲಿ ಮನೆ ಕಳೆದುಕೊಂಡ ಜನರಿಗಾಗಿ ಕಾಯ್ದಿರಿಸಿದ ನಿವೇಶನ ಸ್ಥಳಕ್ಕೆ ಭೇಟಿ ನೀಡಿ ಸದರಿ ಸ್ಥಳದಲ್ಲಿ ಯಾವುದೇ ಒತ್ತುವರಿಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಸರ್ಕಾರಿ ಸ್ವಾಮಿತ್ವದ ಯಾವುದೇ ಜಾಗವು ಒತ್ತುವರಿಯಾಗಬಾರದು ಆ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಲು ತಿಳಿಸಿದರು. ಗ್ರಾಮದಲ್ಲಿ ಖಾಲಿ ಇರುವ ಜಾಗದಲ್ಲಿ ಸ್ವಚ್ಛತೆ ಕಾಪಾಡಬೇಕು. ಗ್ರಾಮದ ಜನರು ಮೂಲ ಸೌಕರ್ಯಗಳಿಂದ ವಂಚಿರಾಗಬಾರದು ಎಂದು ಸಲಹೆ ನೀಡಿದರು.

ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಚೇತನ ರಾಠೋಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶ್ರೀ ತುಂಗಳ, ಗ್ರಾಮದ ಮುಖಂಡ ಸುರೇಶ ಬಿರಾದಾರ, ಲಾಲಪ್ಪ ಗುಡಮನಿ, ಮಂಜು ನಡಗಡ್ಡಿ, ತಾಲೂಕು ಮಾಹಿತಿ, ಶಿಕ್ಷಣ ಮತ್ತು ಸಂವಹನ ಸಂಯೋಜಕ ಕಲ್ಲಪ್ಪ ನಂದರಗಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಸಚಿನ ಕಾಂಬಳೆ, ಲಕ್ಷ್ಮೀ ಮಹಲ ಮಲ್ಲಪ್ಪ ಸಾಲಗಲ್ಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-26-1359505820

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.