ತಿಕೋಟಾ: ತಾಲ್ಲೂಕಿನೆಲ್ಲೆಡೆ ಸೋಮವಾರ ಆರಂಭವಾದ ಶಾಲೆಗಳಲ್ಲಿ ಮಕ್ಕಳಿಗೆ ಸಿಹಿ ತಿನ್ನಿಸಿ, ಹೂವು ನೀಡಿ, ಪಠ್ಯಪುಸ್ತಕ, ಸಮವಸ್ತ್ರ ನೀಡಿ ಮೊದಲ ದಿನ ಅದ್ದೂರಿಯಾಗಿ ಸ್ವಾಗತಿಸಿದರು.

ತಾಲ್ಲೂಕಿನ ಘೋಣಸಗಿ ಗ್ರಾಮದಲ್ಲಿ ಎತ್ತಿನ ಬಂಡೆ ಸಮೇತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪ್ರಭಾತ್ ಪೇರಿ ಮಾಡುವ ಮೂಲಕ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವಂತೆ ವಿನಂತಿಸಲಾಯಿತು. ಶಾಲಾ ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷ, ಸದಸ್ಯರು, ಮಕ್ಕಳೊಂದಿಗೆ ಬೆರೆತು ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡರು.

ಶಾಲೆಯನ್ನು ತಳಿರುತೋರಣಗಳಿಂದ ಸಿಂಗರಿಸಿ, ರಂಗೋಲಿಯ ಚಿತ್ತಾರ ಬಿಡಿಸಿ ಶಾಲಾ ಕೋಣೆಗಳನ್ನು ಸಿಂಗರಿಸಲಾಗಿತ್ತು. ಮಕ್ಕಳು ಖುಷಿಯಿಂದ ಶಾಲೆಗೆ ಆಗಮಿಸಿ ಸಂಭ್ರಮಿಸಿದರು.

ಮುಖ್ಯಶಿಕ್ಷಕ ಅಂಜನಾ ದೇಶಮುಖ, ಎಸ್ಡಿಎಂಸಿ ಅಧ್ಯಕ್ಷ ಪೈಗಂಬರ ಜತ್ತಿ, ರೇವಣಸಿದ್ದ ಕೋಟಿಮನಿ, ಇಮಾಮಸಾಬ ಮುಲ್ಲಾ, ಸಿದರಾಯ ಖವಿ, ಬಸವಂತ ಮಾಳಿ, ಕೇದಾರಿ ಜಮಾದಾರ, ಅಮರಸಿದ್ಧ ಭಜಂತ್ರಿ, ಶಿಕ್ಷಕರು, ಗ್ರಾಮಸ್ಥರು, ಮಕ್ಕಳು ಇದ್ದರು.

ದೇವರಹಿಪ್ಪರಗಿ: ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಮುಖ್ಯಶಿಕ್ಷಕ ಮಡಿವಾಳಪ್ಪ ಹಂದಿಗನೂರ ಹೇಳಿದರು.

ತಾಲ್ಲೂಕಿನ ಹುಣಶ್ಯಾಳ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಜರುಗಿದ 2026–27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವದಲ್ಲಿ ಮಾತನಾಡಿದರು.

‘ಒಂದರಿಂದ ಐದನೇ ತರಗತಿಯವರೆಗೆ ದ್ವಿಭಾಷಾ ಮಾಧ್ಯಮ ಹಾಗೂ ಎಲ್ಕೆಜಿ, ಯುಕೆಜಿ ಹಾಗೂ 1ನೇ ತರಗತಿಗಳಿಗೆ ಪ್ರವೇಶ ನೀಡಲಾಗುತ್ತಿದೆ ಎಂದು ತಿಳಿಸಿ ಮಕ್ಕಳಿಗೆ ಹಾಗೂ ಪಾಲಕರಿಗೆ ನಿಯಮಿತ ಹಾಜರಾತಿ ಮತ್ತು ಅಧ್ಯಯನದ ಮಹತ್ವವನ್ನು ವಿವರಿಸಿದರು.

ಶಾಲಾ ದಾಖಲಾತಿ ಆಂದೋಲನವನ್ನು ಆಚರಿಸಲಾಯಿತು. ಶಾಲಾ ಆವರಣದಲ್ಲಿ ಪೋಷಕ, ಶಿಕ್ಷಕರ ಸಭೆ ಕೈಗೊಳ್ಳಲಾಯಿತು. ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕರು ಹೂವು, ಸಿಹಿ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ನಂತರ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಆಗಮಿಸಿದ ಅತಿಥಿಗಳು ಮಕ್ಕಳಿಗೆ ಶುಭ ಹಾರೈಸಿದರು.

ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರ ಈರಣ್ಣ ಬಡಿಗೇರ, ರಮೇಶ ದಿಡ್ಡಿಮನಿ ಶಿಕ್ಷಕರಾದ ಸುರೇಶ ಭೋವಿ, ಆರ್.ಬಿ.ಬಿರಾದಾರ, ವಿಠ್ಠಲ ಮೇತ್ರಿ, ಮುತ್ತು ಕುಂಟೋಜಿ ಸೇರಿದಂತೆ ಪೋಷಕರು ಹಾಗೂ ವಿದ್ಯಾರ್ಥಿಗಳ ಇದ್ದರು.

ಇಂಡಿ: ‘ಶಾಲೆಗಳು ಮಕ್ಕಳಲ್ಲಿ ಮೌಲ್ಯ ಬೆಳೆಸುತ್ತವೆ. ಉತ್ತಮ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರು ಕೈಜೋಡಿಸಬೇಕು’ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕ ಶಿವಚಂದ್ರ ಕತ್ನಳ್ಳಿ ಹೇಳಿದರು.

ತಾಲ್ಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಪಾಲಕರ ಸಭೆಗೆ ಚಾಲನೆ ನೀಡಿ ಮಾತನಾಡಿದರು.

ಪ್ರಭಾರ ಬಿಇಒ ಎಸ್. ಆರ್. ನಡುಗಡ್ಡಿ ಮಾತನಾಡಿದರು.

ಶಿಕ್ಷಕ ಸಂತೋಷ ಬಂಡೆ, ತಾಲ್ಲೂಕು ಅಕ್ಷರ ದಾಸೋಹ ಅಧಿಕಾರಿ ಸುಜಾತಾ ಪೂಜಾರಿ ಮಕ್ಕಳಿಗೆ ಗುಲಾಬಿ ಹೂವು ನೀಡಿ ಬರಮಾಡಿಕೊಂಡರು. ಶಿಕ್ಷಕಿಯರು ಮಕ್ಕಳಿಗೆ ಆರತಿ ಬೆಳಗಿ ಹಣೆಗೆ ತಿಲಕವಿಟ್ಟು ಸ್ವಾಗತಿಸಿದರು. ಹೊಸ ಪಠ್ಯಪುಸ್ತಕ, ಸಮವಸ್ತ್ರವನ್ನು ಮಕ್ಕಳಿಗೆ ವಿತರಿಸುವ ಮೂಲಕ ವಿಶಿಷ್ಟವಾಗಿ ಶಾಲಾ ಪ್ರಾರಂಭೋತ್ಸವ ಆಚರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-26-1951844246

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.