ವಿಜಯಪುರ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ಧಾರಾಕಾರ ಮಳೆ ಸುರಿಯಿತು.
ವಿಜಯಪುರ ನಗರ, ಬಸವನ ಬಾಗೇವಾಡಿ, ಹೊರ್ತಿ, ಇಂಡಿ, ಕೊಲ್ಹಾರ, ದೇವರ ಹಿಪ್ಪರಗಿ ವ್ಯಾಪ್ತಿಯಲ್ಲಿ ಒಂದು ತಾಸು ಧಾರಾಕಾರ ಮಳೆ, ಬಳಿಕ ರಾತ್ರಿಯಿಡೀ ತುಂತುರು ಮಳೆ ಆಯಿತು. ಮಳೆ ನೀರು ರಸ್ತೆ ಮೇಲೆ ಹರಿಯಿತು. ಗುಂಡಿ ಬಿದ್ದ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಯಿತು. ತಗ್ಗು ಪ್ರದೇಶಗಳು, ಹೊಲಗಳಲ್ಲಿ ನೀರು ನಿಂತಿದ್ದ ದೃಶ್ಯ ಕಂಡುಬಂದಿತು.
ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಳೆಗಳಿಗೆ ಅನುಕೂಲವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.