ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ನಿಂದ ಇಬ್ಬರು ಸಾವಿಗೀಡಾಗಿರುವುದಾಗಿ ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ತಿಳಿಸಿದ್ದಾರೆ

ನಗರದ ಬಾಂಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 33 ವರ್ಷ ವಯೋಮಾನದ ಕೋವಿಡ್ ರೋಗಿ (ಪಿ188675) ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ.

ತೀವ್ರ ಉಸಿರಾಟ ತೊಂದರೆಯಿಂದ ಬಳಲಿದ್ದ ಇವರು ಆಗಸ್ಟ್ 2 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಆಗಸ್ಟ್ 10ರಂದು ಸಾವಿಗೀಡಾಗಿದ್ದಾರೆ.

ಬಸವನ ಬಾಗೇವಾಡಿಯ 65 ವರ್ಷ ವಯೋಮಾನದ ವ್ಯಕ್ತಿ (ಪಿ101156) ತೀವ್ರ ಉಸಿರಾಟ ತೊಂದರೆ, ಕೆಮ್ಮು, ಮೈಕೈ ನೋವಿನಿಂದ ಬಳಲಿ ಜುಲೈ 24 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜುಲೈ 27 ರಂದು ಮೃತಪಟ್ಟಿದ್ದಾರೆ.

ಜಿಲ್ಲಾಧಿಕಾರಿ ಸೂಚನೆ:ಪಾಸಿಟಿವ್ ಪ್ರಕರಣಗಳ ಪ್ರಥಮ ಸಂಪರ್ಕ 10 ಹಾಗೂ ದ್ವಿತೀಯ ಸಂಪರ್ಕ 10 ಗಳನ್ನು ಪತ್ತೆ ಹಚ್ಚಿ, ಅವುಗಳನ್ನು ಕ್ವಾಂಟ್ಯಾಕ್ಟ್ ಟ್ರೇಸಿಂಗ್ ಆ್ಯಪ್ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.