ವಿಜಯಪುರ: ಸೋಲಾಪುರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸುತ್ತಿರುವ ಸೇತುವೆಯಿಂದ ಕೆಳಗೆ ಹೊಲಗಳಿಗೆ ಹೋಗಲು ಅಂಡರ್ ಪಾಸ್ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ -ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಸಂಸದ ರಮೇಶ ಜಿಗಜಿಣಗಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ‘ನಗರದ ಹೊರವಲಯದ ಬೆಂಗಳೂರ ಬೈಪಾಸ್ನಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿರುವುದರಿಂದ ಅಲ್ಲೊಂದು ಮೇಲ್ಸೇತುವೆ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಅದರ ಫಲವಾಗಿ ಇಂದು ಮೇಲ್ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಮೇಲ್ಸೇತುವೆ ಕೆಳಗೆ ಅಂಡರ್ ಪಾಸ್ ನಿರ್ಮಾಣ ಮಾಡಬೇಕಾಗಿರುವುದು ಅಗತ್ಯ’ ಎಂದರು. ಸಂಗಮೇಶ್ವರ ಆಸ್ಪತ್ರೆಯ ಹತ್ತಿರ ಅಂಡರ್ ಪಾಸ್ ನಿರ್ಮಾಣ ಮಾಡುವುದರಿಂದ ರೈತರು ಹಾಗೂ ಸಾರ್ವಜನಿಕರಿಗೆ ಅತ್ಯಂತ ಅನುಕೂಲವಾಗಲಿದೆ. ವಿಶೇಷವಾಗಿ ಉತ್ನಾಳ ಗ್ರಾಮಕ್ಕೆ ನೇರವಾಗಿ ಹೋಗಲು ಅನುಕೂಲವಾಗಲಿದೆ’ ಎಂದರು.

‘ಒಂದು ವೇಳೆ ಸಂಗಮೇಶ ಆಸ್ಪತ್ರೆ ಹತ್ತಿರ ಅಂಡರ್ ಪಾಸ್ ಮಾಡದಿದ್ದಲ್ಲಿ ಎತ್ತಿನ ಗಾಡಿ ಹಾಗೂ ಟ್ರ್ಯಾಕ್ಟರ್ಗಳು ಹಿಟ್ನಳ್ಳಿ ಟೋಲ್ ಸಮೀಪ ಹೋಗಿ ಮರಳಿ ಇತ್ತ ಕಡೆ ಬರಬೇಕಾಗುತ್ತದೆ. ಇದರಿಂದ ಟ್ರಾಫಿಕ್ ಸಮಸ್ಯೆ ಆಗುವುದರ ಜೊತೆಗೆ ಅಪಘಾತಗಳಾಗುವ ಸಂಭವವಿದೆ. ಅಲ್ಲದೇ, ಹೆಚ್ಚಿನ ಇಂಧನ ವ್ಯಯಿಸಿ ರೈತರಿಗೆ ಹೆಚ್ಚುವರಿ ಹೊರೆ ಬೀಳುತ್ತದೆ. ಇದಕ್ಕೆಲ್ಲ ಕಡಿವಾಣ ಹಾಕಲು ಅಂಡರ್ಪಾಸ್ ನಿರ್ಮಾಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ಸಂಗಪ್ಪ ಟಕ್ಕೆ, ಶಿವನಗೌಡ ನಾಡಗೌಡ, ಯಮನೂರಿ ಸಿಂದಗಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-26-331778711

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.