ವಿಜಯಪುರ: ‘ವಜ್ರ ಹನುಮಾನ ದೇವಾಲಯದ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಪೂರಕವಾಗಿ ಪೈಪಲೈನ್ ಸ್ಥಳಾಂತರ ಮಾಡಲು ರಾಜ್ಯ ಸರ್ಕಾರ ಉದಾಸೀನ ನೀತಿ ಅನುಸರಿಸುತ್ತಿದ್ದು, ಕೇಂದ್ರದ ಅನುದಾನ ವಾಪಸ್ಸಾಗುವ ಭೀತಿ ಎದುರಾಗಿದೆ’ ಎಂದು ಸಂಸದ ರಮೇಶ ಜಿಗಜಿಣಗಿ ಆತಂಕ ವ್ಯಕ್ತಪಡಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಜ್ರ ಹನುಮಾನ ದೇವಾಲಯ ಬಳಿ ಅಂಡರ್ ಪಾಸ್ ನಿರ್ಮಾಣ ಸಾರ್ವಜನಿಕರ ಒತ್ತಾಸೆಯಾಗಿದೆ. ಅದಕ್ಕೆ ಪೂರಕವಾಗಿ ₹ 19 ಕೋಟಿ ಅನುದಾನ ಬಿಡುಗಡೆಯಾಗಿದೆ. ಚರಂಡಿ, ಕುಡಿಯುವ ನೀರು ಪೂರೈಕೆ ಮಾಡುವ ಪೈಪ್ ಸ್ಥಳಾಂತರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಆದರೆ ಈ ಕಾಮಗಾರಿ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗಳು ಉದಾಸೀನ ನೀತಿ ಅನುಸರಿಸುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿ ಸೇರಿದಂತೆ ಅನೇಕ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ’ ಎಂದರು.

‘ಅಂಡರ್ ಪಾಸ್ ಇಲ್ಲದೇ ಜನರು ತ್ರಾಸು ಪಡುವಂತಾಗಿದೆ. ಅನುದಾನ ಬಂದು ಮೂರು ತಿಂಗಳಾಗಿವೆ. ಈ ಸಣ್ಣ ಕಾಮಗಾರಿ ಕೈಗೊಳ್ಳಲು ಸಹ ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತ ಪಡಿಸಿದರು. ಇದೇ ರೀತಿ ವಿಳಂಬ ನೀತಿ ಅನುಸರಿಸಿದರೆ ಅನುದಾನವೇ ವಾಪಸ್ ಹೋಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಈ ಪೈಪಲೈನ್ ಮೊದಲಾದ ಕಾಮಗಾರಿ ರೈಲ್ವೆ ಇಲಾಖೆ ಸುಪರ್ದಿಗೆ ಬರುವುದಿಲ್ಲ. ಇದು ಆಯಾ ಸ್ಥಳೀಯ ಸಂಸ್ಥೆ ಕೆಲಸ, ನಗರ ವ್ಯಾಪ್ತಿಗೆ ಬರುವ ಕೆಲಸವನ್ನು ರೈಲ್ವೆ ಇಲಾಖೆ ಹೇಗೆ ಕೈಗೊಳ್ಳಲು ಸಾಧ್ಯ. ಕೇಂದ್ರ ಸರ್ಕಾರ ಯಾವ ರಾಜ್ಯದಲ್ಲಿಯೂ ಯುಟಿಲಿಟಿ ಕಾಮಗಾರಿಗೆ ಅನುದಾನ ನೀಡಿಲ್ಲ. ಗ್ರಾಮದ ಹೊರವಲಯದಲ್ಲಿದ್ದರೆ ಕೇಂದ್ರ ಸರ್ಕಾರ ಮಾಡುತ್ತಿತ್ತು. ನಗರದಲ್ಲಿಯೂ ಕೇಂದ್ರವೇ ಮಾಡೋದಾದರೆ ಸ್ಥಳೀಯ ಸರ್ಕಾರಗಳ ಜವಾಬ್ದಾರಿ ಏನು?’ ಎಂದು ಪ್ರಶ್ನಿಸಿದರು. ‘ಫಂಡರಪುರ ರೈಲನ್ನು ವಿಜಯಪುರ ಮಾರ್ಗವಾಗಿ ಓಡಿಸುವ ನಿಟ್ಟಿನಲ್ಲಿ ಕೇಂದ್ರ ರೈಲ್ವೆ ಸಚಿವಾಲಯಕ್ಕೆ ವಿನಂತಿಸಲಾಗಿದೆ. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದನೆ ದೊರಕಲಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-26-1403878409

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.