ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ವಿವಿಧ ಪಟ್ಟಣ ಪಂಚಾಯ್ತಿ ಚುನಾವಣೆ ವೇಳಾಪಟ್ಟಿ ಪ್ರಕಟ

Last Updated 6 ಡಿಸೆಂಬರ್ 2021, 16:33 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯ ವಿವಿಧ ಪಟ್ಟಣ ಪಂಚಾಯ್ತಿಗಳಿಗೆ ಡಿ.27ರಂದು ನಡೆಯಲಿರುವ ಚುನಾವಣಾ ವೇಳಾಪಟ್ಟಿಯನ್ನು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಪ್ರಕಟಿಸಿದ್ದಾರೆ.

ಡಿ.8ರಂದು ಅಧಿಸೂಚನೆ, ಡಿ.15ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ, ಡಿ.16 ನಾಮಪತ್ರಗಳನ್ನು ಪರಿಶೀಲನೆ ನಡೆಯಲಿದೆ. ಡಿ.18ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ, ಡಿ.27ರಂದು ಬೆಳಿಗ್ಗೆ 7ರಿಂದ ಸಂಜೆ 5ರ ವರೆಗೆ ಮತದಾನ ಹಾಗೂ ಡಿ.30ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಡಿ.8 ರಿಂದ ಡಿ.30 ರ ವರೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮತ್ತು ಉಪಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ನಾಲತವಾಡ, ನಿಡಗುಂದಿ, ದೇವರ ಹಿಪ್ಪರಗಿ, ಆಲಮೇಲ, ಮನಗೂಳಿ, ಕೋಲ್ಹಾರ ಪಟ್ಟಣ ಪಂಚಾಯ್ತಿಗೆ ಚುನಾವಣೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT