ವಿಜಯಪುರ: ‘ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕೇವಲ ಮತಪಟ್ಟಿ ಪರಿಷ್ಕರಣೆಯಲ್ಲ. ನಿರ್ದಿಷ್ಟ ಸಮುದಾಯ, ವರ್ಗದ ಮತದಾರರನ್ನು ಹೊರಗಿಡುವ ಹಾಗೂ ಅವರ ನಾಗರಿಕತ್ವವನ್ನು ರದ್ದುಪಡಿಸುವ ಹುನ್ನಾರ’ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಆರೋಪಿಸಿದರು.

‘ಕೇಂದ್ರ ಬಿಜೆಪಿ ಸರ್ಕಾರವು ಚುನಾವಣಾ ಆಯೋಗದ ಮೂಲಕ ಎಸ್ಐಆರ್ ಎಂಬ ಕಾನೂನುಬಾಹಿರ ಕಾರ್ಯಕ್ಕೆ ಕೈಹಾಕಿದೆ. ಇದರಿಂದ ದೇಶದ ನಾಗರಿಕರ ಪೌರತ್ವಕ್ಕೆ ಅಪಾಯ ಎದುರಾಗಿದೆ’ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಎಸ್ಐಆರ್ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಎಂದು ಈಗಾಗಲೇ ಅನೇಕ ರಾಜ್ಯಗಳು ಆತಂಕ ಮತ್ತು ವಿರೋಧ ವ್ಯಕ್ತಪಡಿಸಿವೆ. ಎಸ್ಐಆರ್ ಸಂಬಂಧಿಸಿದ ಪ್ರಕರಣಗಳು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಯಲ್ಲಿ ಇರುವುದರಿಂದ ಕರ್ನಾಟಕದಲ್ಲಿ ತರಾತುರಿಯಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಸಬಾರದು’ ಎಂದು ಒತ್ತಾಯಿಸಿದರು.

‘ಎಸ್ಐಆರ್ ಮೂಲಕ ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ಮತದಾರರನ್ನು ಹೊರಗಿಟ್ಟು, ಬಳಿಕ ಅವರ ನಾಗರಿಕತ್ವವನ್ನೇ ಮೊಟಕುಗೊಳಿಸುವ ದೊಡ್ಡ ಷಡ್ಯಂತ್ರ ಅಡಗಿದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ನಾಗರಾಜ ಲಂಬು, ಡಾ.ರವಿಕುಮಾರ ಬಿರಾದಾರ, ಫಯಾಜ್ ಕಲಾದಗಿ, ವಸಂತ ಹೊನಮೋಡೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-26-2061607528

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.