ವಿಜಯಪುರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಸಮನ್ವಯ ಸಾಧಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ‘ಸುಜಲಂ ಭಾರತ್ ಆ್ಯಪ್’ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಲ ಜೀವನ್ ಮಿಷನ್ ಹಾಗೂ ಜಲಧಾರೆ ಯೋಜನೆಗಳು ಜನರಿಗಾಗಿ ಇರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಗ್ರಾಮೀಣ ಜನರಿಗೆ ಕುಡಿಯುವ ನೀರು ಪೂರೈಸುವಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಶ್ರಮವಹಿಸಬೇಕು ಎಂದರು.

ನೀರು ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಜಾಗೃತಿ ವಹಿಸಬೇಕು. ಸರ್ಕಾರವು ಅಭಿವೃದ್ಧಿಪಡಿಸಿದ ‘ಸುಜಲಂ ಭಾರತ್ ಆ್ಯಪ್’ ಬಗ್ಗೆ ಮಾಹಿತಿ ತಿಳಿದುಕೊಂಡು, ಮುಂಬರುವ ದಿನಗಳಲ್ಲಿ ಈ ಆ್ಯಪ್ನಲ್ಲಿ ಅವಶ್ಯಕ ಮಾಹಿತಿಯನ್ನು ಇಂದೀಕರಿಸುವ ಮೂಲಕ ಅತ್ಯಂತ ಯಶಸ್ವಿಯಾಗಿ ಯೋಜನೆಗಳ ಅನುಷ್ಠಾನ ಮಾಡಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ. ಬಿ.ಕುಂಬಾರ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಪ್ರತಿ ಮನೆಗೂ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಜಲ ಜೀವನ್ ಮಿಷನ್ ಹಾಗೂ ಜಲಧಾರೆ ಯೋಜನೆಗಳು ಜಾರಿಯಲ್ಲಿದ್ದು, ಈ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆಯನ್ನು ನಿರಂತರವಾಗಿ ಮತ್ತು ಸಮರ್ಪಕವಾಗಿ ಸಂಬಂಧಪಟ್ಟ ಅಧಿಕಾರಿಗಳು ಮೇಲ್ವಿಚಾರಣೆ ಮಾಡಲು ಸಹಾಯಕವಾಗುವಂತೆ ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ ಪ್ರಮುಖ ಡಿಜಿಟಲ್ ಉಪಕ್ರಮವಾದ ‘ಸುಜಲಂ ಭಾರತ್ ಆ್ಯಪ್’ ಅನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಅಧಿಕಾರಿಗಳ ಸಮಯ ಉಳಿತಾಯವಾಗಲಿದೆ ಎಂದರು.

ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಒಂದು ವಾರದಲ್ಲಿ ಕಡ್ಡಾಯವಾಗಿ ದುರಸ್ತಿಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಎಸ್. ಕೋಟೆನ್ನವರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260321-26-2103778485

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.