ಶನಿವಾರ, ಜುಲೈ 24, 2021
27 °C

ವಿಜಯಪುರ: ಕೋವಿಡ್‌-19 ಸೋಂಕಿನಿಂದ ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕೋವಿಡ್‌-19 ಸೋಂಕಿನಿಂದ ಬಳಲುತ್ತಿದ್ದ 66 ವರ್ಷ ವಯುಸ್ಸಿನ ಮಹಿಳೆಯೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಸಾವಿಗೀಡಾಗಿದ್ದಾರೆ.

ತೀವ್ರ ಉಸಿರಾಟ ಮತ್ತು ಜ್ವರದಿಂದ ಬಳಲುತ್ತಿದ್ದ ಮಹಿಳೆ ಜೂನ್‌ 15ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ನಿಂದ ಸಾವಿಗೀಡಾದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಗುರುವಾರ ಸಾವಿಗೀಡಾದ ಮಹಿಳೆ ಮತ್ತು 39 ವರ್ಷ ವಯಸ್ಸಿನ ವ್ಯಕ್ತಿ ಸೇರಿದಂತೆ ಇಬ್ಬರಿಗೆ ಸೋಂಕು ದೃಡಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 238ಕ್ಕೆ ಏರಿಕೆಯಾಗಿದೆ. 196 ಜನರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 35 ಜನ ಸಕ್ರಿಯ ರೋಗಿಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು