ವಿಜಯಪುರ: ನಗರದ ಸಿದ್ದೇಶ್ವರ ಸಂಸ್ಥೆಯ ಡಾ.ಫ.ಗು.ಹಳಕಟ್ಟಿ ಸಭಾ ಭವನದಲ್ಲಿ ಮಂಗಳವಾರ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ 2024-25ನೇ ಸಾಲಿನ ಯೋಜನೆಯಡಿ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮತಕ್ಷೇತ್ರ ವ್ಯಾಪ್ತಿಯ 20 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದರು.

ಬಳಿಕ ಮಾತನಾಡಿ, ‘ಮಹಿಳೆ ಆರ್ಥಿಕವಾಗಿ ಸಶಕ್ತವಾಗಬೇಕು, ಸ್ವಾವಲಂಬಿಯಾಗಬೇಕು. ಹೊಲಿಗೆ ಮೊದಲಾದ ಉದ್ಯಮಗಳನ್ನು ಕೈಗೊಂಡು ಆರ್ಥಿಕವಾಗಿ ಸಬಲವಾಗುವ ಎಲ್ಲ ಅವಕಾಶಗಳು ಮಹಿಳೆಗೆ ಇವೆ. ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮುನ್ನಡೆಯಬೇಕು’ ಎಂದು ಕರೆ ನೀಡಿದರು.

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮಹಿಳೆಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-26-2093602925

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.