ವಿಜಯಪುರ: ‘ಪತ್ರಕರ್ತನಿಗೆ ಜ್ಞಾನ ಮತ್ತು ಪರಿಜ್ಞಾನ ಇದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ’ ಎಂದು ‘ಪ್ರಜಾವಾಣಿ’ಯ ಬೆಳಗಾವಿ ಜಿಲ್ಲಾ ಹಿರಿಯ ವರದಿಗಾರ ಸಂತೋಷ ಚಿನಗುಡಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ವುಮನ್ ಮೀಡಿಯಾ ಕ್ಲಬ್’ ಉದ್ಘಾಟಿಸಿ ಅವರು ಮಾತನಾಡಿದರು.

‘ಪತ್ರಿಕೋದ್ಯಮವು ಕೇವಲ ತರಗತಿ ಕೋಣೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಪತ್ರಿಕೆಗಳನ್ನು ಕೇವಲ ನೋಡದೆ, ಅವನ್ನು ನಿಯಮಿತವಾಗಿ ಓದಿದಾಗ ಮಾತ್ರ ಪರಿಪೂರ್ಣ ಜ್ಞಾನ ಪಡೆದುಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.

ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, ‘ಜ್ಞಾನ ಮತ್ತು ಪರಿಜ್ಞಾನವನ್ನು ಅಳವಡಿಸಿಕೊಂಡು ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಪಡೆಯಬಹುದು. ಪತ್ರಕರ್ತರು ‘ಎಲ್ಲರೊಳಗೊಂದು ನಾವಲ್ಲ’ ಎಂಬ ಮನೋಭಾವ ಜೀವನದಲ್ಲಿ ಅಳವಡಿಸಿಕೊಂಡರೆ ಅಸಾಮಾನ್ಯರಾಗಿ ಬೆಳೆಯಲು ಸಾಧ್ಯವಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-26-167794706

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.