ವಿಜಯಪುರ: ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೋಮವಾರ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕರ ಅಹವಾಲು ಆಲಿಸಿದರು.

ನಗರದ ವಾರ್ಡ್ ನಂ.33ರ ಶಹಾಪೇಟೆ ಲೇಔಟ್ನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾದ ₹10 ಲಕ್ಷ ಅನುದಾನದಲ್ಲಿ ವಿಜಯಲಕ್ಷ್ಮೀ ಸರ್ವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ ಕಟ್ಟಡ ನಿರ್ಮಾಣ ಕಾಮಗಾರಿ, ಬನಶಂಕರಿ ದೇವಸ್ಥಾನದ ಆವರಣದಲ್ಲಿ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ₹15 ಲಕ್ಷ ಮೊತ್ತದ ವೇದಮಾತಾ ಶ್ರೀ ಗಾಯತ್ರಿ ಪ್ರತಿಷ್ಠಾನ ಟ್ರಸ್ಟ್ನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ, ರಹೀಮ್ ನಗರ ಕೌಜಲಗಿ ತೋಟದ ಜೈ ಹನುಮಾನ್ ಗುಡಿ ಹತ್ತಿರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾದ ₹15 ಲಕ್ಷ ಅನುದಾನದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಕುರಿಯವರ, ಪ್ರೇಮಾನಂದ ಬಿರಾದಾರ, ಮುಖಂಡರಾದ ಶಂಕರ ಹೂಗಾರ, ವಿಠ್ಠಲ ನಡುವಿನಕೇರಿ, ರಾಜಶೇಖರ ಭಜಂತ್ರಿ, ನಾಗರಾಜ ಮುಳವಾಡ, ಎನ್.ಎಂ. ಪ್ಯಾಟಿ, ಆನಂದ ದೊಡಮನಿ, ಸಂಗಮೇಶ ಮೇತ್ರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-26-640731622

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.