ವಿಜಯಪುರ: ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿಗೆ ಅನಿವಾರ್ಯವಲ್ಲ, ಬಿಜೆಪಿ ಮತ್ತು ಕಾರ್ಯಕರ್ತರು ಯತ್ನಾಳ ಅವರಿಗೆ ಅನಿವಾರ್ಯ. ಏನೂ ಅಲ್ಲದ ಯತ್ನಾಳ ಅವರನ್ನು ಶಾಸಕ, ಸಂಸದ, ಕೇಂದ್ರ ಸಚಿವರನ್ನಾಗಿ ಮಾಡಿದ್ದೇ ಬಿಜೆಪಿ’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯತ್ನಾಳ ಅವರು ಬಿಜೆಪಿ ಸೇರ್ಪಡೆ ವಿಷಯ ಸದ್ಯ ಅಪ್ರಸ್ತುತ, ಈ ವಿಷಯವನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ’ ಎಂದು ಹೇಳಿದರು.

‘ಒಂದು ವೇಳೆ ಬಿಜೆಪಿಗೆ ಮರಳಿ ಸೇರುವುದಾದರೆ ಯತ್ನಾಳ ಅವರು ತಮ್ಮ ಈಗಿನ ವರ್ತನೆಯನ್ನು ಬದಲಾಯಿಸಿಕೊಳ್ಳಲೇ ಬೇಕಾಗುತ್ತದೆ. ಪಕ್ಷದ ಸಿದ್ಧಾಂತ ಒಪ್ಪಿಕೊಳ್ಳಬೇಕಾಗುತ್ತದೆ. ಇಲ್ಲವಾದರೆ ಅವರ ಸೇರ್ಪಡೆಗೆ ಪಕ್ಷದಲ್ಲಿ ವಿರೋಧ ವ್ಯಕ್ತವಾಗಲಿದೆ’ ಎಂದು ತಿಳಿಸಿದರು.

‘ಹಾಲಿ ಬಿಜೆಪಿ ರಾಷ್ಟ್ರ ಘಟಕದ ಅಧ್ಯಕ್ಷರಾದ ನಿತೀನ್ ನಬೀನ್ ಅವರಿಗೆ ಕೇವಲ 46 ವರ್ಷ. ಆದರೂ ಕೂಡ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಅಧ್ಯಕ್ಷರನ್ನು ‘ನಮ್ಮ ಬಾಸ್’ ಎಂದು ಹೇಳಿದ್ಧಾರೆ. ಹೀಗಿರುವಾಗ ಯತ್ನಾಳ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ವಿರುದ್ದ ಮಾತನಾಡದೇ ಅವರ ನಾಯಕತ್ವ ಒಪ್ಪಿಕೊಳ್ಳುವುದಾದರೆ ಅವರು ಪಕ್ಷ ಸೇರ್ಪಡೆಯಾಗಬಹುದು’ ಎಂದು ಸಲಹೆ ನೀಡಿದರು.

‘ಬಾಗಲಕೋಟೆ ಉಪ ಚುನಾವಣೆಯಲ್ಲಿ ಯತ್ನಾಳ ಪ್ರಚಾರ ಬಿಜೆಪಿಗೆ ಅನಿವಾರ್ಯವಲ್ಲ. ಬಿಜೆಪಿಯಿಂದ ಯತ್ನಾಳ ಅವರ ಮನೆಗೆ ಹೋಗಿ ಪ್ರಚಾರ ಮಾಡಲು ಬನ್ನಿ ಎಂದು ಹೇಳಿಲ್ಲ. ಸ್ವ ಇಚ್ಛೆಯಿಂದ ಬಂದಿರುವುದಕ್ಕೆ ಅವರ ವಿರೋಧವಿಲ್ಲ’ ಎಂದು ಹೇಳಿದರು.

‘ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳ ಆಡಳಿತ ಸಂಪೂರ್ಣ ವೈಫಲ್ಯವಾಗಿದೆ. ಜನರ ಆಕ್ರೋಶ ಚುನಾವಣಾ ಕಣದಲ್ಲಿ ಎದ್ದು ಕಾಣುತ್ತಿದೆ. ಇಡೀ ಸಚಿವ ಸಂಪುಟ ಬಾಗಲಕೋಟೆ ಚುನಾವಣೆ ಪ್ರಚಾರಕ್ಕೆ ಬಂದಿದ್ದಾರೆ. ಆದರೂ ಬಿಜೆಪಿ ಗೆಲುವು ನಿಶ್ಚಿತ’ ಎಂದು ಹೇಳಿದರು.

‘ಬಾಗಲಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ. ವಿಜಯಪುರ ಜಿಲ್ಲೆಯ ಮುಖಂಡರು, ಕಾರ್ಯಕರ್ತರು ಬಾಗಲಕೋಟೆಗೆ ತೆರಳಿ ನಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಕೈಗೊಂಡು, ಗೆಲುವಿಗೆ ಶ್ರಮಿಸಬೇಕು’ ಎಂದು ಮನವಿ ಮಾಡಿದರು.

ಮುಖಂಡರಾದ ಮಲ್ಲನಗೌಡ ಪಾಟೀಲ, ಎ.ಜಿ.ಬಿರಾದಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-26-1586829970

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.