ಹೊರ್ತಿ: ಕೃಷಿ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವರೆಗೂ ಪೂರೈಕೆಯಾಗುತ್ತಿದ್ದ ವಿದ್ಯುತ್, 4 ಗಂಟೆಗೆ ಮಾಡಿದ್ದು, ಝಳಕಿ ವಿಭಾಗದಲ್ಲಿ ದುರಸ್ತಿ ಸಮಸ್ಯೆ ಎಂದು ವಿದ್ಯುತ್ ಕಡಿತವಾಗುತ್ತಿದೆ. ಇದರಿಂದ ದಿನಕ್ಕೆ 3 ಅಥವಾ 2 ಗಂಟೆಗೆ ಮಾತ್ರ ಪೂರೈಕೆ ಆಗುತ್ತಿರುವುದರಿಂದ ಬೆಳೆಗಳಿಗೆ ನೀರು ಸಾಕಾಗುತ್ತಿಲ್ಲ. ಆದ್ದರಿಂದ ಸಮರ್ಪಕ ವಿದ್ಯುತ್ ಪೂರೈಸಬೇಕೆಂದು ಝಳಕಿ ರೈತರಾದ ಪ್ರಕಾಶ ಬಿರಾದಾರ ಹಾಗೂ ರಾಘವೇಂದ್ರ ಕಾಗರ ಒತ್ತಾಯಿಸಿದ್ದಾರೆ.

ಝಳಕಿ ಭಾಗದ ವಿದ್ಯುತ್ ಇಲಾಖೆ ವ್ಯಾಪ್ತಿಯ ಗ್ರಾಮಗಳಿಗೆ ಸರಿಯಾದ ಸಮಯಕ್ಕೆ ವಿದ್ಯುತ್ ಪೂರೈಕೆಯಾಗುತ್ತಿಲ್ಲ, ಇದರಿಂದ ಬೆಳೆಗಳಿಗೆ ನೀರು ಪೂರೈಕೆ ಮಾಡಲು ತುಂಬಾ ಸಮಸ್ಯೆಯಾಗಿದೆ. ಬೆಳೆಗಳು ಹಾಳಾಗುತ್ತಿವೆ. ಲಕ್ಷಗಟ್ಟಲೆ ಸಾಲ ಮಾಡಿ ದ್ರಾಕ್ಷಿ, ದಾಳಿಂಬೆ, ಬಾಳೆ, ಲಿಂಬೆ, ಬೆಳೆ, ಕಬ್ಬು ಬೆಳೆದಿದ್ದು, ಸರಿಯಾಗಿ ವಿದ್ಯುತ್ ಪೂರೈಕೆ ಮತ್ತು ನೀರಿಲ್ಲದೆ ಬೆಳೆಯಲು ಸಾಧ್ಯವಿಲ್ಲ. ನೀರು ಬಿಡಲು ವಿದ್ಯುತ್ ಬೇಕು, ವಿದ್ಯುತ್ ಪೂರೈಕೆ ಮಾಡದೇ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೂಡಲೇ ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕೆಂಕೆಂದು ಝಳಕಿ ವಿದ್ಯುತ್ ವಿತರಣಾ ವಿಭಾಗದ ಅಧಿಕಾರಿಗಳಿಗೆ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-26-384740191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.