ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಜಿಲ್ಲಾ ಪಂಚಾಯಿತಿ ಚುನಾವಣೆ: ಇಬ್ಬರು ನಾಮಪತ್ರ ಸಲ್ಲಿಕೆ

Last Updated 30 ಜೂನ್ 2020, 6:52 IST
ಅಕ್ಷರ ಗಾತ್ರ

ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರ ಸ್ಥಾನಕ್ಕೆ ಇಂದು ನಡೆಯುತ್ತಿರುವ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಸಾರವಾಡ ಜಿ.ಪಂ. ಕಾಂಗ್ರೆಸ್ ಸದಸ್ಯೆ ಸುಜಾತಾ ಕಳ್ಳಿಮನಿ ಹಾಗೂ ನಿವರಗಿ ಜಿ.ಪಂ ಬಿಜೆಪಿ ಸದಸ್ಯ ಭೀಮಾಶಂಕರ್ ಬಿರಾದಾರ ನಾಮಪತ್ರ ಸಲ್ಲಿಸಿದ್ದಾರೆ. ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ 'ಅ' ಸ್ಥಾನಕ್ಕೆ ಮೀಸಲಿಡಲಾಗಿದೆ. ಮಧ್ಯಾಹ್ನ 3 ಕ್ಕೆ ಚುನಾವಣೆ ನಿಗದಿಯಾಗಿದೆ.

ಒಟ್ಟು 42 ಸದಸ್ಯ ಸ್ಥಾನ ಒಳಗೊಂಡಿರುವ ಜಿಲ್ಲಾ ಪಂಚಾಯ್ತಿಯಲ್ಲಿ ಬಿಜೆಪಿ 20, ಕಾಂಗ್ರೆಸ್ 18, ಜೆಡಿಎಸ್ 3 ಮತ್ತು ಪಕ್ಷೇತರ 1 ಸದಸ್ಯರಿದ್ದಾರೆ. ಕಳೆದ ಎರಡು ಅವಧಿಯಲ್ಲಿ ಕಾಂಗ್ರೆಸ್ ಪಕ್ಷವು ಅಧ್ಯಕ್ಷ ಗಾದಿಯನ್ನು ಏರಿತ್ತು. ಇದೀಗ ಉಳಿದಿರುವ ಕೊನೆಯ ಅವಧಿಗೂ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನ ನಡೆಸಿದೆ. ಈ ನಡುವೆ ಸೋಮವಾರ ರಾತ್ರಿ ಕಾಂಗ್ರೆಸ್‌ನ ಬಬಲೇಶ್ವರ ಜಿ.ಪಂ. ಕ್ಷೇತ್ರದ ಸದಸ್ಯ ಉಮೇಶ್ ಕೋಳಕೂರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ. ಇತ್ತ ಬಿಜೆಪಿ ಸದಸ್ಯರು ಮೂರು ದಿನಗಳಿಂದ ಬಾಗಲಕೋಟೆಯ ರೆಸಾರ್ಟ್ ವೊಂದರಲ್ಲಿ ತಂಗಿದ್ದಾರೆ. ಇಬ್ಬರು ಬಿಜೆಪಿ ಸದಸ್ಯರನ್ನು ಕಾಂಗ್ರೆಸ್ ತನ್ನತ್ತ ಸೆಳೆದುಕೊಂಡಿದೆ. ಜೆಡಿಎಸ್‌ನ ಇಬ್ಬರು, ಕಾಂಗ್ರೆಸ್‌ನ ಮತ್ತೊಬ್ಬರು ಬಿಜೆಪಿ ಪರ ನಿಂತಿದ್ದಾರೆ.

ಕಾಂಗ್ರೆಸ್, ಬಿಜೆಪಿ ನಡುವಿನ ಜಿದ್ದಾಜಿದ್ದಿನಲ್ಲಿ ಅಧ್ಯಕ್ಷ ಸ್ಥಾನ ಯಾರ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT