ಶುಕ್ರವಾರ, ಆಗಸ್ಟ್ 14, 2020
27 °C

ವಿಜಯಪುರ | ವಿಪ್‌ ಉಲ್ಲಂಘನೆ: ಜಿ.ಪಂ.ಸದಸ್ಯರ ಉಚ್ಛಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಪ್‌ ಉಲ್ಲಂಘಿಸಿ ಬಿಜೆಪಿಗೆ ಮತ ಚಲಾಯಿಸಿದ ಮೂವರು ಸದಸ್ಯರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟಿಸಲಾಗಿದೆ.

ಬಬಲೇಶ್ವರ ಜಿಲ್ಲಾ ಪಂಚಾಯ್ತಿ ಕ್ಷೇತ್ರದ ಸದಸ್ಯ ಉಮೇಶ ಕೋಳ್ಕೂರ, ಸಾಲೂಟಗಿ ಕ್ಷೇತ್ರದ  ಶಿವಯೋಗಪ್ಪ ನೇದಲಗಿ ಹಾಗೂ ಹಲಸಂಗಿ ಕ್ಷೇತ್ರದ ಶಿವಶರಣ ಭೈರಗೊಂಡ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಪ್ರೊ. ರಾಜು ಆಲಗೂರ ತಿಳಿಸಿದ್ದಾರೆ.

ಮೂವರ ಜಿಲ್ಲಾ ಪಂಚಾಯ್ತಿ ಸದಸ್ಯತ್ವವನ್ನು ರದ್ದು ಪಡಿಸಲು ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು