ಬುಧವಾರ, ಜೂನ್ 16, 2021
21 °C

‘ಮತದಾರರ ಪಟ್ಟಿ ಪರಿಷ್ಕರಣೆ: ಬಿಎಲ್‍ಎ ನೇಮಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಮತದಾರರ ಪಟ್ಟಿಯಲ್ಲಿನ ಬದಲಾವಣೆಗಳನ್ನು ಪಾರದರ್ಶಕವಾಗಿ ಪರಿಶೀಲಿಸಲು ಅನುಕೂಲವಾಗುವಂತೆ ತಕ್ಷಣ ಮತಗಟ್ಟೆ ಮಟ್ಟದ ಏಜೆಂಟರನ್ನು ನೇಮಕ ಮಾಡಿಕೊಳ್ಳುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ 2021ರ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಪಟ್ಟಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸಲು ತಮ್ಮ ಪಕ್ಷದ ವತಿಯಿಂದ ನೇಮಕ ಮಾಡಿದ ಬಿಎಲ್‍ಎಗಳು ಈ ಪರಿಷ್ಕರಣೆಯಲ್ಲಿ ತೊಡಗಿದ್ದಲ್ಲಿ ಪಕ್ಷಗಳಿಗೂ ಮತ್ತು ಜನತೆಗೆ ಮತದಾರರ ಪಟ್ಟಿಯ ಮೇಲೆ ನಂಬಿಕೆ ಬರುವ ಹಿನ್ನೆಲೆಯಲ್ಲಿ ತಕ್ಷಣ ಬಿಎಲ್‍ಎಗಳನ್ನು ನೇಮಿಸಿಕೊಳ್ಳುವಂತೆ ಅವರು ಸಲಹೆ ನೀಡಿದರು.

ವಿವಿಧ ಪಕ್ಷದ ಕಾರ್ಯಕರ್ತರಿಗೆ ಮತ್ತು ಬಿಎಲ್‍ಎಗಳಿಗೆ ಈ ಕುರಿತು ಸೂಕ್ತ ಅರಿವು ಮೂಡಿಸುವಂತೆ ತಿಳಿಸಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿಎಲ್‍ಎಗಳ ಪಾತ್ರ ಬಹುಮುಖ್ಯವಾಗಿರುವುದರಿಂದ ಆದ್ಯತೆ ಮೇಲೆ ಮತಗಟ್ಟೆ ಮಟ್ಟದ ಏಜೆಂಟ್‍ಗಳನ್ನು ನೇಮಿಸಿಕೊಂಡು ಮಾಹಿತಿ ಒದಗಿಸುವಂತೆ ಅವರು ಸೂಚನೆ ನೀಡಿದರು.

ಪ್ರತಿ ಮತಕ್ಷೇತ್ರಗಳಲ್ಲಿ ಪ್ರತಿ ಮತಗಟ್ಟೆಗೆ ಅದೇ ಮತಗಟ್ಟೆ ಮತದಾರರು ಇರುವಂತಹವರನ್ನು ಒಬ್ಬ ಬಿಎಲ್‍ಎ ನೇಮಿಸಿಕೊಳ್ಳಬೇಕು. ಚುನಾವಣಾ ಆಯೋಗವು ಚುನಾವಣೆಯ ವಿವಿಧ ಕಾರ್ಯಗಳಾದ ಮತದಾರರ ಪಟ್ಟಿ ಪರಿಷ್ಕರಣೆ, ಮತಗಟ್ಟೆಗಳ ಸುವ್ಯವಸ್ಥೆ ಕುರಿತು ಸಕ್ರಿಯವಾಗಿ ಭಾಗವಹಿಸಲು ಬಿಎಲ್‍ಎಗಳನ್ನು ನೇಮಿಸಿಕೊಳ್ಳುವುದು ಅತ್ಯಂತ ಪ್ರಮುಖ ಎಂದರು.

ಚುನಾವಣಾ ಆಯೋಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳಾಪಟ್ಟಿ ಹೊರಡಿಸಿದೆ. ಆಗಸ್ಟ್ 10 ರಿಂದ ಅಕ್ಟೋಬರ್ 31 ರವರೆಗೆ ಮತಗಟ್ಟೆಗಳ ಸೇರ್ಪಡೆ, ಮತದಾರರ ಪಟ್ಟಿಯಲ್ಲಿನ ಸಣ್ಣಪುಟ್ಟ ನ್ಯೂನತೆ ಸರಿಪಡಿಸುವಿಕೆ, ಮತದಾರರ ಪಟ್ಟಿಯಲ್ಲಿ ಇನ್ನುಳಿದ ಮತಗಟ್ಟೆ ವಿಳಾಸ, ಮೂಲ ಸೌಕರ್ಯ ಒಳಗೊಂಡಂತೆ ಮಾಹಿತಿ ಸರಿಪಡಿಸುವಿಕೆ ಹಾಗೂ ಮತಗಟ್ಟೆಗಳ ಅಂತಿಮ ಪಟ್ಟಿಯನ್ನು ತಯಾರಿಸಿ ಚುನಾವಣಾ ಆಯೋಗದ ಅನುಮೋದನೆಗೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.

ನವೆಂಬರ್ 16 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು, ನವೆಂಬರ್ 16ರಿಂದ ಡಿಸೆಂಬರ್ 15 ರವರೆಗೆ ಮತದಾರರ ಪಟ್ಟಿ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಅವಧಿ ನಿಗದಿಪಡಿಸಲಾಗಿದೆ ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ, ವಿವಿಧ ಪಕ್ಷದ ಪ್ರತಿನಿಧಿಗಳು ಉಪಸ್ಥಿತರಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು