ಭಾನುವಾರ, ಅಕ್ಟೋಬರ್ 2, 2022
19 °C

ಆಲಮಟ್ಟಿ ಜಲಾಶಯ: ಹೆಚ್ಚಿದ ಹೊರಹರಿವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಆಲಮಟ್ಟಿ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಹೊರಹರಿವನ್ನು 1 ಲಕ್ಷ ಕ್ಯುಸೆಕ್ ನಿಂದ 1.25 ಲಕ್ಷ ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ.

ಸೋಮವಾರ ಸಂಜೆಯಿಂದ ನದಿಪಾತ್ರಕ್ಕೆ 1 ಲಕ್ಷ ಕ್ಯುಸೆಕ್ ನೀರು ಬಿಡಲಾಗುತ್ತಿತ್ತು. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಕರ್ನಾಟಕ ದ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯ ಕಾರಣ ಒಳಹರಿವು ಹೆಚ್ಚುತ್ತಿದೆ.

ಹೀಗಾಗಿ ಜಲಾಶಯದ ಮುಂಭಾಗದ ನದಿ ತೀರದ ಗ್ರಾಮಗಳಾದ ಅರಳದಿನ್ನಿ, ಯಲಗೂರ, ಯಲ್ಲಮ್ಮನ ಬೂದಿಹಾಳ, ಮಸೂತಿ ಗ್ರಾಮಗಳಲ್ಲಿ ಈಗಾಗಲೇ ಗ್ರಾಮ ಪಂಚಾಯಿತಿ ವತಿಯಿಂದ ಡಂಗುರ ಸಾರಿ ನದಿ ತೀರಕ್ಕೆ ಹೋಗದಂತೆ ಎಚ್ಚರಿಸಲಾಗಿದೆ. ಮಂಗಳವಾರವೂ ಮತ್ತೆ ಈ ಎಲ್ಲಾ ಗ್ರಾಮಗಳಲ್ಲಿ ಡಂಗುರ ಸಾರಲಾಯಿತು.

ಜಲಾಶಯದಲ್ಲಿ 519.27 ಮೀ. ವರೆಗೆ ನೀರಿದ್ದು, 117 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 79, 492 ಕ್ಯುಸೆಕ್ ನೀರು‌‌ ಹರಿದುಬರುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು