ಸೋಮವಾರ, ಜನವರಿ 17, 2022
21 °C

ವಿಜಯಪುರ: ನೀರು ಸರಬರಾಜು ಮಂಡಳಿಯ ಎಂಜಿನಿಯರ್‌ ಎಸಿಬಿ ಬಲೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಬಾಬು‌ ನದಾಫ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಬಲೆಗೆ ಬಿದ್ದದ್ದಾರೆ.

ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಿಂದ  ಟೆಂಡರ್‌ ಪಡೆದು, ನಗರದಲ್ಲಿ ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದ್ದು, ಈ ಘಟಕಗಳಿಗೆ ಸಂಬಂಧಿಸಿದಂತೆ ₹ 25 ಲಕ್ಷ ಮೊತ್ತದ ಬಿಲ್‌ ಮಾಡಿಕೊಡಲು ಎಇಇ ನದಾಫ ₹ 1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ವಿಜಯಪುರ ಪುಲಕೇಶಿ ನಗರದ ಆರ್‌.ಓ ಪ್ಲಾಂಟ್‌ ಗುತ್ತಿಗೆದಾರ ಸುರೇಶ ಸಗರ ಎಂಬುವವರು ಎಸಿಬಿಗೆ ದೂರು ನೀಡಿದ್ದರು. 

ಈ ಸಂಬಂಧ ಮಂಗಳವಾರ ಸಂಜೆ ಮಂಡಳಿಯ ಉಪ ವಿಭಾಗ ಕಚೇರಿಯಲ್ಲಿ ಗುತ್ತಿಗೆದಾರರಿಂದ ₹ 50 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಬಂಧಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಮಂಜುನಾಥ ಗಂಗಲ್, ಇನ್‌ಸ್ಪೆಕ್ಟರ್‌ ಪರಮೇಶ್ವರ ಹಾಗೂ ಚಂದ್ರಕಲಾ ದಾಳಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು