ಶುಕ್ರವಾರ, ಮೇ 14, 2021
32 °C

ಕೋವಿಡ್‌ನಿಂದ ರಕ್ಷಿಸಿಕೊಳ್ಳಲು ತಪ್ಪದೇ ಮಾಸ್ಕ್‌ ಧರಿಸಿ: ಶಶಿಕಲಾ ಜೊಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ, ಕೋವಿಡ್‌ನಿಂದ ರಕ್ಷಿಸಿಕೊಳ್ಳಲು ತಪ್ಪದೇ ಮಾಸ್ಕ್‌ ಧರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.

ನಗರದ ಗಾಂಧಿ ವೃತ್ತ, ಸಿದ್ಧೇಶ್ವರ ದೇವಸ್ಥಾನ ಮಾರ್ಗದಲ್ಲಿ ಬಿಸಿಲನ್ನು ಲೆಕ್ಕಿಸದೆ ಮಾಸ್ಕ್‌ ಧರಿಸುವ ಕುರಿತು ಜನ ಜಾಗೃತಿ  ಮೂಡಿಸಿದರು.

ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ಗುಲಾಬಿ ಹೂವು ಹಾಗೂ ಮಾಸ್ಕ್‌ ನೀಡಿ, ತಮ್ಮ ಹಾಗೂ ಕುಟುಂಬದ ಸುರಕ್ಷತೆಗಾಗಿ ಮಾಸ್ಕ ಧರಿಸಲು ಮನವಿ ಮಾಡಿದರು. ಜೊತೆಗೆ ಮಹಿಳೆಯರು ವಿಶೇಷವಾಗಿ ತಮ್ಮ ಹಾಗೂ ಚಿಕ್ಕ ಮಕ್ಕಳ ಸುರಕ್ಷತೆ ಬಗ್ಗೆ ಕಾಳಜಿವಹಿಸಲು ಸಲಹೆ ನೀಡಿದರು.

ಅಂಗಡಿ, ಮಳಿಗೆಗಳಿಗೆ ತೆರಳಿ ವ್ಯಾಪಾರಿಗಳಲ್ಲಿಯೂ ಅರಿವು ಮೂಡಿಸಿ, ಸರ್ಕಾರದ ಮಾರ್ಗಸೂಚಿ ತಪ್ಪದೇ ಪಾಲಿಸಲು ತಿಳಿ ಹೇಳಿದರು.

ಕರ್ನಾಟಕ ರಾಜ್ಯ ಬೀಜ ಹಾಗೂ ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು