ವಿಜಯಪುರ: ಜಿಲ್ಲೆಯ ನಿಡಗುಂದಿ ಪಟ್ಟಣದ ಗೌರೀಶ್ವರ ದೇವಸ್ಥಾನ ಬಳಿ ಮನೆ ಚಾವಣಿ ಕುಸಿದು ಮಹಾದೇವಿ ವಾರದ (55) ಎಂಬ ಮಹಿಳೆ ಸಾವಿಗೀದ್ದಾರೆ.

ಮೊನ್ನೆ ಸುರಿದ ಮಳೆಗೆ ನೆನೆದಿದ್ದ ಹಳೆ ಮನೆಯ ಚಾವಣಿ ಗುರುವಾರ ನಸುಕಿನಲ್ಲಿ ಕುಸಿದು ಬಿದ್ದ ಪರಿಣಾಮ ನಿದ್ರೆಯಲ್ಲಿದ್ದ ಮಹಿಳೆ ಸಾವಿಗೀಡಾಗಿದ್ದಾರೆ.

ಮನೆಯ ಹೊರಗೆ ಮಲಗಿದ್ದ ಮೃತ ಮಹಾದೇವಿ ಅವರ ಪತಿ ಶಿವಾನಂದ ಪಾರಾಗಿದ್ದಾರೆ.

ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಐದು ದಿನಗಳ ಹಿಂದಷ್ಟೇ ಜಿಲ್ಲೆಯ ಮೋರಟಗಿಯಲ್ಲಿ ಮನೆ ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದ ಘಟನೆ ಜನರ ಮನಸ್ಸಿನಿಂದ ಮಾಸುವ ಮುನ್ನವೇ ನಿಡಗುಂದಿಯಲ್ಲಿ ಅದೇ ರೀತಿಯ ದುರ್ಘಟನೆ ಮರುಕಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.