ವಿಜಯಪುರ: ಮಹಿಳಾ ಸಬಲೀಕರಣಕ್ಕಾಗಿ ನಡೆದಿರುವ ಈ ಮ್ಯಾರಾಥಾನ್ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ. ತುಳಸಿಮಾಲ ಹೇಳಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಮ್ಯಾರಾಥಾನ್ ಓಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ಸಮಾಜದಲ್ಲಿ ಮಹಿಳಾ ಸಬಲೀಕರಣ ವಿವಿಧ ಆಯಾಮಗಳಲ್ಲಿ ಸಾಕಾರಗೊಳ್ಳುತ್ತಿರುವುದು ಅತ್ಯಂತ ಹರ್ಷದಾಯಕವಾಗಿದೆ ಎಂದು ಅವರು ಹೇಳಿದರು.

ಬೆಳಿಗ್ಗೆ 6ಕ್ಕೆ ನಗರದ ಸೈನಿಕ ಸ್ಕೂಲ್, ಕೋರ್ಟ್ ಸರ್ಕಲ್, ಬಿ.ಎಲ್.ಡಿ.ಇ ರಸ್ತೆ ಮತ್ತು ಗೋಳಗುಮ್ಮಟನಿಂದ ಏಕಕಾಲಕ್ಕೆ ಆರಂಭವಾದ ಮ್ಯಾರಾಥಾನ್ ಗಾಂಧಿಚೌಕದಲ್ಲಿ ಮುಕ್ತಾಯವಾಯಿತು.

ಮ್ಯಾರಾಥಾನ್‍ನಲ್ಲಿ ಮಹಿಳಾ ವಿವಿಯ ವಿವಿಧ ವಿಭಾಗಗಳ ಬೋಧಕ, ಬೋಧಕೇತರ ಸಿಬ್ಬಂದಿ, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.