ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಯೋಗದಲ್ಲಿ ಫೆ.3 ರಂದು ಬೆಳಿಗ್ಗೆ 11ಕ್ಕೆ ವಾಲಿಬಾಲ್ ಕ್ರೀಡೆಯ ಕುರಿತು ಮೂರು ದಿನಗಳ ಕಾರ್ಯಾಗಾರ ಮತ್ತು ನಿರ್ಣಾಯಕರ ಪರೀಕ್ಷೆ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ.

ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕರ್ನಾಟಕ ವಾಲಿಬಾಲ್ ಸಂಸ್ಥೆಯ ಉಪಾಧ್ಯಕ್ಷ ಭೀಮಸೇನ ಕೊಕರೆ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ.ಟಿ ವಹಿಸಲಿದ್ದಾರೆ. ಅತಿಥಿಗಳಾಗಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ.ಚಂದ್ರಶೇಖರ ಭಾಗವಹಿಸಲಿದ್ದಾರೆ.

ಪ್ರೊ.ಡಿ.ಎಂ. ಜ್ಯೋತಿ, ಪ್ರೊ.ರಾಜಕುಮಾರ ಮಾಲಿಪಾಟೀಲ, ಪ್ರೊ. ಶ್ರೀನಿವಾಸ, ಪ್ರೊ.ಜ್ಯೋತಿ ಉಪಾದ್ಯೆ, ಕಿರಣ ಜಿ.ಎನ್, ಅಶ್ವಿನಿ.ಕೆ.ಎನ್, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಹನುಮಂತಯ್ಯ ಪೂಜಾರ, ವಿಶ್ವನಾಥ ನಡಕಟ್ಟಿ, ಪ್ರೊ.ಸಕ್ಪಾಲ್ ಹೂವಣ್ಣ ಭಾಗವಹಿಸಲಿದ್ದಾರೆ.

ಸಮಾರೋಪ: ಫೆ.5 ರಂದು ಮಧ್ಯಾಹ್ನ 03ಕ್ಕೆ ಸಮಾರೋಪ ಸಮಾರಂಭ ಜರುಗಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಅಂತರಾಷ್ಟ್ರೀಯ ಕ್ರೀಡಾಪಟು ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ಬಾಲಾಜಿ ಪ್ರಭು ಭಾಗವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ವಾಲಿಬಾಲ್ ತರಬೇತಿದಾರ ರಾಜೇಶ್ ಪತ್ತಾರ ಹಾಗೂ ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ ಮತ್ತು ತೀರ್ಪುಗಾರರ ಮಂಡಳಿಯ ಸಂಚಾಲಕ ಕೆ.ವೆಂಕಟೇಶ್ಗೌಡ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.