ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ

Published 21 ಫೆಬ್ರುವರಿ 2024, 15:38 IST
Last Updated 21 ಫೆಬ್ರುವರಿ 2024, 15:38 IST
ಅಕ್ಷರ ಗಾತ್ರ

ವಿಜಯಪುರ: ವಿದ್ಯಾರ್ಥಿಗಳ ಬದುಕಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳು ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ಯಾವುದೇ ರೀತಿಯ ಆತಂಕ, ಗೊಂದಲ, ಒತ್ತಡಕ್ಕೆ ಒಳಗಾಗದೇ, ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.

‘ಮಾರ್ಚ್‌ 1 ರಿಂದ 22ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ಹಾಗೂ ಮಾರ್ಚ್‌ 25 ರಿಂದ ಏ. 6ರವರೆಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆಗೆ ಅತ್ಯಂತ ಕಡಿಮೆ ಸಮಯ ಉಳಿದಿರುವುದರಿಂದ, ವಿದ್ಯಾರ್ಥಿಗಳು ಒಂದು ಕ್ಷಣವನ್ನೂ ವ್ಯರ್ಥ ಮಾಡದೇ, ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಶಿಕ್ಷಕರು ಹಾಗೂ ಪಾಲಕರು ವಿದ್ಯಾರ್ಥಿಗಳ ಯಶಸ್ಸಿಗಾಗಿ ಸಹಕಾರ, ಅಗತ್ಯ ಮಾರ್ಗದರ್ಶನ ನೀಡಬೇಕು’ ಎಂದು ಸಲಹೆ ನೀಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT