ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೇವರಹಿಪ್ಪರಗಿ | ಮೋದಿ ಮತ್ತೆ ಪ್ರಧಾನಿಯಾಗುವುದು ನಿಶ್ಚಿತ: ಯತ್ನಾಳ

Published 4 ಮೇ 2024, 15:52 IST
Last Updated 4 ಮೇ 2024, 15:52 IST
ಅಕ್ಷರ ಗಾತ್ರ

ದೇವರಹಿಪ್ಪರಗಿ: ದೇಶದ ಜನತೆಗೆ ನೀಡಿದ ಎಲ್ಲಾ ಭರವಸೆಗಳು ಸೇರಿದಂತೆ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿ ಮೂರನೆಯ ಬಾರಿಗೆ ಪ್ರಧಾನಿ ಮೋದಿಜಿ ಗದ್ದುಗೆಯೇರುವುದು ನಿಶ್ಚಿತ ಎಂದು ವಿಜಯಪುರ ಮತಕ್ಷೇತ್ರದ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಹೇಳಿದರು.

ಪಟ್ಟಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪ್ರಚಾರದ ಅಂಗವಾಗಿ ಜರುಗಿದ ರೋಡ್ ಶೋದಲ್ಲಿ ಪಾಲ್ಗೊಂಡು ಮಾತನಾಡಿದರು.

ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವದಲ್ಲಿ ಭಾರತ ಪ್ರಬಲ ಆರ್ಥಿಕ ಶಕ್ತಿಯಾಗಿ ಬೆಳೆದಿದೆ. ನೆರೆಯ ಬದ್ಧವೈರಿ ಪಾಕಿಸ್ತಾನ ಜನತೆ ಕೂಡಾ ಮೋದಿಯವರನ್ನು ಕೊಂಡಾಡುತ್ತಿದೆ. ಇಂದು ಭಾರತದಲ್ಲಿ ದೇಶವಿರೋಧಿ ಚಟುವಟಿಕೆಗಳಿಗೆ ಕಾಂಗ್ರೆಸ್ ಅವಕಾಶ ನೀಡುತ್ತಿದೆ. ಇದಕ್ಕೆ ವಿಧಾನಸೌಧದಲ್ಲಿ ವಿರೋಧಿ ರಾಷ್ಟ್ರಪರ ಜಿಂದಾಬಾದ್ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನೀಯ ಹತ್ಯೆ ಪ್ರಕರಣಗಳೇ ಸಾಕ್ಷಿ. ಇಂಥ ಘಟನೆಗಳನ್ನು ಕಾಂಗ್ರೆಸ್ ನಾಯಕರು ಪದೇಪದೇ ಸಮರ್ಥನೆ ಮಾಡಿಕೊಳ್ಳುತ್ತಿರುವುದು ಕಾಂಗ್ರೆಸ್ ಪಕ್ಷದ ದೇಶ ವಿರೋಧಿ ನೀತಿಗೆ ನಿದರ್ಶನವಾಗಿದೆ ಎಂದು ತಿಳಿಸಿದರು.

ಮಾಜಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಮಾತನಾಡಿ, ಧರ್ಮ ಹಾಗೂ ಅಧರ್ಮಗಳ ನಡುವಿನ ಹೋರಾಟದಲ್ಲಿ ಧರ್ಮದ ಪರ ನಿಲ್ಲಬೇಕಾಗಿದೆ. ಆದ್ದರಿಂದ ತಾವೆಲ್ಲ ಬಿಜೆಪಿಯನ್ನು ಬೆಂಬಲಿಸಿ ಸಮೃದ್ಧ, ಸಶಕ್ತ ಭಾರತ ನಿರ್ಮಾಣಕ್ಕಾಗಿ ರಮೇಶ ಜಿಗಜಿಣಗಿ ಅವರಿಗೆ ಮತ ಹಾಕೋಣ ಎಂದರು.

ರೋಡ್ ಶೋ ಆರಂಭದಲ್ಲಿ ಬಿಜೆಪಿ ಪ್ರಮುಖರಾದ ಬಸನಗೌಡ ಪಾಟೀಲ(ನಾಗರಾಳ ಹುಲಿ), ಪ್ರಭುಗೌಡ ಬಿರಾದಾರ(ಅಸ್ಕಿ), ಸಿದ್ದು ಬುಳ್ಳಾ, ಶಿಲ್ಪಾ ಕುದರಗೊಂಡ, ಶಿವರಾಜ ತಳವಾರ ಮಾತನಾಡಿದರು. ರೋಡ್ ಶೋ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಹಾದು ಕರಿಸಿದ್ಧೇಶ್ವರ ದೇವಸ್ಥಾನದ ಮುಂದೆ ಸಮಾರೋಪಗೊಂಡಿತು.

ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ, ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ, ಮತಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಸಾಯಬಣ್ಣ ಬಾಗೇವಾಡಿ, ಭೀಮನಗೌಡ ಸಿದರಡ್ಡಿ, ಕಾಸುಗೌಡ ಜಲಕತ್ತಿ, ಗಾಯತ್ರಿ ದೇವೂರ, ಪ್ರಕಾಶ ದೊಡಮನಿ, ಭೀಮನಗೌಡ ಲಚ್ಯಾಣ, ಸೋಮಶೇಖರ ಹಿರೇಮಠ, ಸೋಮು ದೇವೂರ, ಮಹಾಂತೇಶ ಬಿರಾದಾರ, ಶ್ರೀಮಂತ ತಳವಾರ, ಬಸವರಾಜ ಕಲ್ಲೂರ, ಬಾಬುಗೌಡ ಹರನಾಳ, ಕಾಶೀಪತಿ ಕುದರಿ, ಸುನೀಲ ಮಾಗಿ ಇದ್ದರು.

ದೇವರಹಿಪ್ಪರಗಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪ್ರಚಾರದ ಅಂಗವಾಗಿ ಬಸನಗೌಡ ಪಾಟೀಲ(ಯತ್ನಾಳ) ನೇತೃತ್ವದಲ್ಲಿ ಜರುಗಿದ ರೋಡ್ ಶೋದಲ್ಲಿ ಕಂಡು ಬಂದ ಜನಸ್ತೋಮ.
ದೇವರಹಿಪ್ಪರಗಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪ್ರಚಾರದ ಅಂಗವಾಗಿ ಬಸನಗೌಡ ಪಾಟೀಲ(ಯತ್ನಾಳ) ನೇತೃತ್ವದಲ್ಲಿ ಜರುಗಿದ ರೋಡ್ ಶೋದಲ್ಲಿ ಕಂಡು ಬಂದ ಜನಸ್ತೋಮ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT