ಸೋಮವಾರ, ಜುಲೈ 26, 2021
22 °C

ವಿಜಯಪುರ: ತೋಳ ಕಚ್ಚಿ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ವಿಜಯಪುರ: ನಿಡಗುಂದಿ ತಾಲ್ಲೂಕಿನ ಮಸೂತಿ ಗ್ರಾಮದಲ್ಲಿ ರಾತ್ರಿ ಹೊಲಕ್ಕೆ ನೀರು ಹಾಯಿಸಲು ಹೋದಾಗ ತೋಳ ಕಚ್ಚಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಮೃತಪಟ್ಟಿದ್ದಾನೆ.

ಮೃತ ಯುವಕ ಮಸೂತಿ ಗ್ರಾಮದ ಮಲ್ಲಪ್ಪ ಶಿವಪ್ಪ ಕೂಡಗಿ (37).

ಕಳೆದ 15 ದಿನಗಳ ಹಿಂದೆ ಹೊಲದಲ್ಲಿ ರಾತ್ರಿ ನೀರುಣಿಸುವಾಗ ತೋಳ ಮುಖ, ಕಾಲು ಸೇರಿದಂತೆ ನಾನಾ ಕಡೆ ಕಚ್ಚಿತ್ತು. ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ನಸುಕಿನ ಜಾವ ಯುವಕ ಮೃತಪಟ್ಟಿದ್ದಾನೆ. 

ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು