ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಕಾರ್ಯ: ವರದಿ ನೀಡಲು ಡಿಸಿ ಸೂಚನೆ 

Last Updated 7 ನವೆಂಬರ್ 2020, 14:56 IST
ಅಕ್ಷರ ಗಾತ್ರ

ವಿಜಯಪುರ:ನೆಹರು ಯುವ ಕೇಂದ್ರದ ವತಿಯಿಂದ ಕಳೆದ ವರ್ಷದಲ್ಲಿ ಕೈಗೊಳ್ಳಲಾದ ವಿವಿಧ ಚಟುವಟಿಕೆಗಳ ಬಗ್ಗೆ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು. ಆ ವರದಿ ಆಧಾರದ ಮೇಲೆ ಪ್ರಸಕ್ತ 2020-21ನೇ ಸಾಲಿನ ಕ್ರಿಯಾಯೋಜನೆಗೆ ಅನುಮೋದನೆ ನೀಡಲು ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನೆಹರು ಯುವಕೇಂದ್ರದ ಯುವ ಕಾರ್ಯಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಯುವ ಕಾರ್ಯ ಚಟುವಟಿಕೆಗಳು ಪಾರದರ್ಶಕ ರೀತಿಯಲ್ಲಿ ನಡೆಸುವ ದಿಸೆಯಲ್ಲಿ ಸಂಬಂಧಪಟ್ಟ ಅಧಿಕಾರಿ ಮತ್ತು ಸಮಿತಿ ಸದಸ್ಯರು ಕಾರ್ಯ ನಿರ್ವಹಿಸಲು ಸೂಚಿಸಿದರು.

ಯಾವುದೇ ರೀತಿಯ ದೂರುಗಳು ಬರದಂತೆ ಕಾರ್ಯನಿರ್ವಹಿಸಬೇಕು. ಯುವ ಕೇಂದ್ರದ ಕಾರ್ಯಚಟುವಟಿಕೆಗಳನ್ನು ನಿರಂತರ ಪರಿಶೀಲಿಸಲಾಗುವುದು ಎಂದರು.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಸೂಕ್ತ ಪ್ರಗತಿ ಸಾಧಿಸಲು ವಿವಿಧ ಇಲಾಖೆಗಳೊಂದಿಗೆ ಯುವ ಸಂಘಟನೆಗಳು ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಯುವ ಸಮನ್ವಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ನೆಹರು ಯುವ ಕೇಂದ್ರದ ಯುವ ಸಮನ್ವಯ ಅಧಿಕಾರಿ ರಾಹುಲ್ ಕ್ರಿಯಾಯೋಜನೆ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಟಿ.ಸಿದ್ಧಣ್ಣ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಜಿ ಲೋಣಿ, ಎನ್‍ಎಸ್‍ಎಸ್ ಅಧಿಕಾರಿ ಸಜ್ಜಾದೆ, ಬೇಬಿ ದೊಡಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT