ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ

Published 19 ಮೇ 2024, 4:20 IST
Last Updated 19 ಮೇ 2024, 4:20 IST
ಅಕ್ಷರ ಗಾತ್ರ

ವಿಜಯಪುರ: ನಗರದ ಎಪಿಎಂಸಿ‌ಯ ಕುರಿ ಮತ್ತು ಮೇಕೆ ಮಾರುಕಟ್ಟೆಯ ಬಳಿ ಯವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.

ವಿಜಯಪುರ ನಗರದ ಕಂವಾರ ಓಣಿ ‌ನಿವಾಸಿ ರೋಹಿತ್ ಸುಭಾಶ ಪವಾರ (22) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.

ದುಷ್ಕರ್ಮಿಗಳು ಯುವಕನನ್ನು ಕೊಲೆಗೈದು ಮುಳ್ಳುಕಂಟಿಯಲ್ಲಿ ಶವ ಬಿಸಾಡಿ ಹೋಗಿದ್ದಾರೆ.

ಸ್ಥಳದಲ್ಲಿ ಬಿಯರ್ ಬಾಟಲ್, ಚಿಪ್ಸ್ ಪ್ಯಾಕೆಟ್ ಇದ್ದು,

ಕುಡಿದ ಮತ್ತಿನಲ್ಲಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಆತನ‌ ಪರಿಚಯಸ್ಥರೇ ಕೊಲೆ ಮಾಡಿರೋ ಶಂಕೆ ಇದೆ.

ಕೊಲೆಯಾದ ರೋಹಿತ್ ಸ್ನೇಹಿತ ಖಾಲಿದ್ ಇನಾಂದಾರ್ ರೋಹಿತ್ ಪೋಷಕರಿಗೆ ನಿನ್ನೆ ತಡರಾತ್ರಿ 2.21 ಕ್ಕೆ ಕರೆ ಮಾಡಿ ರೋಹಿತ್ ಕೊಲೆಯಾಗಿದೆ ಎಂದು ಮಾಹಿತಿ ನೀಡಿದ್ದಾನೆ.

ಕರೆ ಅನ್ವಯ ರೋಹಿತ್ ಮನೆಯವರು ಆತನಿಗಾಗಿ ಹುಡುಕಾಡಿದ್ದರು‌

ಖಾಲೀದ್ ಮನೆಗೆ ಹೋದರೂ ಅಲ್ಲಿರಲಿಲ್ಲ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ನಂತರ ರೋಹಿತ್ ಗಾಗಿ ಹುಡುಕಾಡಿದಾಗ ಆತನ ಶವ ಎಪಿಎಂಸಿ ಆವರಣದಲ್ಲಿ ಕಂಡು ಬಂದಿದೆ.

ಕುಟುಂಬಸ್ಥರಿಂದ ಎಪಿಎಂಸಿ ಪೊಲೀಸರಿಗೆ ಮಾಹಿತಿ ನೀಡಿದ್ದು,

ಸ್ಥಳಕ್ಕೆ ಆಗಮಿಸಿದ ವಿಜಯಪುರ ಡಿವೈಎಸ್ಪಿ ಬಸವರಾಜ ಯಲಿಗಾರ ಹಾಗೂ ಇತರೆ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT