ಗುರುವಾರ , ಜುಲೈ 29, 2021
27 °C

ವಿಜಯಪುರ ಜಿ.ಪಂ.ಅಧ್ಯಕ್ಷ ಸ್ಥಾನಕ್ಕೆ 30ರಂದು ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಶಿವಯೋಗಪ್ಪ ನೇದಲಗಿ ಅವರ ರಾಜೀನಾಮೆಯಿಂದ ತೆರವಾದ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಜೂನ್‌ 30ರಂದು ಚುನಾವಣೆ ದಿನಾಂಕ ನಿಗದಿಯಾಗಿದೆ.

ಒಟ್ಟು 42 ಸ್ಥಾನವನ್ನು ಒಳಗೊಂಡಿರುವ ವಿಜಯಪುರ ಜಿಲ್ಲಾ ಪಂಚಾಯ್ತಿಯಲ್ಲಿ ಪ್ರಸ್ತುತ ಬಿಜೆಪಿ 20, ಕಾಂಗ್ರೆಸ್‌ 18 ಮತ್ತು ಜೆಡಿಎಸ್‌ 3 ಮತ್ತು ಪಕ್ಷೇತರ 1 ಸದಸ್ಯ ಬಲಾಬಲವನ್ನು ಹೊಂದಿವೆ.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ಕಾಂಗ್ರೆಸ್‌ ಹಾಗೂ ಪಡೆದುಕೊಳ್ಳಲು ಬಿಜೆಪಿ ನಡುವೆ ಪೈಪೋಟಿ ಏರ್ಪಟ್ಟಿದೆ. ಪ್ರಸ್ತುತ ಜಿಲ್ಲಾ ಪಂಚಾಯ್ತಿಯ ಅವಧಿಯು 2021ರ ಮೇ 7ಕ್ಕೆ ಕೊನೆಗೊಳ್ಳಲಿದೆ.

ಸದ್ಯ ಪ್ರಭುಗೌಡ ದೇಸಾಯಿ ಹಂಗಾಮಿ ಅಧ್ಯಕ್ಷರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು