ವಿಜಾಪುರ: ಪತ್ರಕರ್ತರು ಎಲ್ಲರೊಂದಿಗೆ ಹೊಂದಿಕೊಳ್ಳುವ ಸುಮಧುರ ಗುಣವನ್ನು ಬೆಳೆಸಿಕೊಂಡಾಗ ಮಾತ್ರ ಉತ್ತಮ ಪತ್ರಕರ್ತರಾಗಿ ರೂಪುಗೊಳ್ಳಲು ಸಾಧ್ಯ ಎಂದು ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ನಿರ್ದೇಶಕ ನಾಗೇಂದ್ರಸ್ವಾಮಿ ಹೇಳಿದರು.ಇಲ್ಲಿಯ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ‘ಮಾಧ್ಯಮ ಮನೆ ಚಟುವಟಿಕೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇವತ್ತು ಎಲ್ಲ ಕ್ಷೇತ್ರಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಅದು ಪತ್ರಿಕೋದ್ಯಮ ಕ್ಷೇತ್ರವನ್ನೂ ಬಿಟ್ಟಿಲ್ಲ ಎಂದರು.

ಪತ್ರಕರ್ತ ಅಶೋಕ ಬಸವನಹಳ್ಳಿ ಮಾತನಾಡಿ, ಮಾಧ್ಯಮಗಳು, ರಾಜಕಾರಣಿಗಳು, ಬಂಡವಾಳಶಾಹಿಗಳು ಒಂದಕ್ಕೊಂದು ಕೊಂಡಿಯಾಗಿವೆ. ಇವುಗಳನ್ನು ಬಿಡಿಸಲು ಸಾಧ್ಯವಿಲ್ಲ. ಈ ವಿಷ ವರ್ತುಲದಲ್ಲಿ ಕೆಲಸ ಮಾಡುವಾಗ ಪತ್ರಕರ್ತರಾದವರು ಎಚ್ಚರಿಕೆಯಿಂದ ಇರಬೇಕು ಎಂದರು.ಸುರೇಶ ಕುಮಾರ ಮಾತನಾಡಿದರು. ವಿಜಾಪುರ ವಲಯದ ಕ್ಷೇತ್ರ ಪ್ರಚಾರ ಅಧಿಕಾರಿ ಶಿವಾ ಮೇಸ್ತ್ರಿ ಉಪಸ್ಥಿತರಿದ್ದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಓಂಕಾರ ಕಾಕಡೆ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಡಾ.ಜೆ.ಎಂ ಚಂದುನವರ ವಂದಿಸಿದರು.

ರಕ್ತದಾನ ಶಿಬಿರ: ವಿಜಾಪುರದ ಲಯನ್ಸ್ ಬ್ಲಡ್ ಬ್ಯಾಂಕ್ನಲ್ಲಿ ಇತ್ತೀಚೆಗೆ ಮಹಿಳಾ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ರಕ್ತದಾನ ಶಿಬಿರವನ್ನು ಮೀನಾ ಕನಮಡಿ ಉದ್ಘಾಟಿಸಿದರು. ಡಾ.ಪ್ರೇಮಾನಂದ ಅಂಬಲಿ, ಡಾ.ಬಿ.ಎಸ್. ತಮಗೊಂಡ, ಲಕ್ಷ್ಮಿ ದೇಸಾಯಿ, ಅನುಜಾ ತಾಳಿಕೋಟಿ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.