ವಿಜಾಪುರ: ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟವನ್ನು ಬೆಂಗಳೂರಿನಲ್ಲಿ ಇದೇ 18ರಿಂದ 20ರವರೆಗೆ ಆಯೋಜಿಸಲಾಗಿದೆ. ಇದೇ 18ರಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.
ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ವಿಜೇತರದ ಕ್ರೀಡಾಪಟುಗಳು ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಬಹುದಾಗಿದೆ. ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಇಲಾಖೆ ವತಿಯಿಂದ ಟೀ ಶರ್ಟ್ ಹಾಗೂ ಕ್ಯಾಪ್ ವಿತರಿಸಲಾಗುತ್ತಿದ್ದು, ಕಡ್ಡಾಯವಾಗಿ ಕ್ಯಾಪ್ ಹಾಗೂ ಟೀ ಶರ್ಟ್್ ಧರಿಸಿ ಕ್ರೀಡಾಕೂಟದಲ್ಲಿ ಭಾಗವಹಿಸಿಬೇಕು.
ಕ್ರೀಡಾಕೂಟದ ಸ್ಮರಣ ಸಂಚಿಕೆ ಹೊರತರಲಾಗುತ್ತಿದ್ದು, ಸಾಧಕ ನೌಕರರ ಮಾಹಿತಿ ಹಾಗೂ ಭಾವಚಿತ್ರವನ್ನು ಇದೇ10 ರೊಳಗಾಗಿ ಕೇಂದ್ರ ಸಂಘಕ್ಕೆ ಕಳುಹಿಸಿಕೊಡಬೇಕು. ಮಾಹಿತಿಗೆ ದೂ: 08352-251085 ಸಂಪರ್ಕಿಸಬಹುದು.