ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲ; ರೈತರಲ್ಲಿ ಜಾಗೃತಿ ಮೂಡಿಸಿ

ಅಧಿಕಾರಿಗಳಿಗೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ನೀಲಮ್ಮ ಮೇಟಿ ಸೂಚನೆ
Last Updated 15 ಫೆಬ್ರುವರಿ 2017, 12:16 IST
ಅಕ್ಷರ ಗಾತ್ರ

ವಿಜಯಪುರ: ರೈತರ ಅನುಕೂಲಕ್ಕಾಗಿ ರುವ ಅಲ್ಪಾವಧಿ, ದೀರ್ಘಾವಧಿ ಸಾಲಗಳ ಕುರಿತು ಸೂಕ್ತ ಜಾಗೃತಿ ಮೂಡಿಸುವಂತೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ನೀಲಮ್ಮ ಮೇಟಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಡಿಪಿ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು ರೈತರಿಗೆ ಸರಿಯಾದ ಮಾಹಿತಿ ಇಲ್ಲದಿರುವುದರಿಂದ ತೀವ್ರ ರೀತಿಯ ತೊಂದರೆಯಾಗುತ್ತಿದೆ ಎಂದರು.

ಬರ ಪರಿಸ್ಥಿತಿ ಇರುವುದರಿಂದ ರೈತರಿಗೆ ಆರ್ಥಿಕವಾಗಿ ಅನುಕೂಲತೆಯ ದೃಷ್ಟಿಯಿಂದ ವಿವಿಧ ಸಾಲಗಳ ಬಗ್ಗೆ ಸೂಕ್ತ ಜಾಗೃತಿ ಮೂಡಿಸಬೇಕು. ವಿಶೇಷ ವಾಗಿ ಕರಪತ್ರ, ಇತರೆ ಮಾಧ್ಯಮಗಳ ಮೂಲಕ ರೈತರಲ್ಲಿ ಜಾಗೃತಿ ಮೂಡಿಸುವುದರ ಮೂಲಕ ಅವರ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ನ್ಯಾಯಬೆಲೆ ಅಂಗಡಿಗಳಲ್ಲಿ ತೂಕ ದಲ್ಲಿ ಆಗುವ ಮೋಸ ಮತ್ತು ಇತರ ಅವ್ಯವಹಾರಗಳನ್ನು ತಡೆದು ಸಮರ್ಪಕ ಪಡಿತರ ಪೂರೈಕೆಯಾಗುವಂತೆ ನೋಡಿ ಕೊಳ್ಳಲು ಆಹಾರ ಇಲಾಖೆ ಅಧಿಕಾರಿ ಗಳಿಗೆ ತಿಳಿಸಿದ ಅವರು, ಜಿಲ್ಲೆಯ ಆಯಾ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿ ಗಳ ಗಮನಕ್ಕೆ ತರುವ ಮೂಲಕ ಅಧಿ ಕಾರಿಗಳು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಂತೆ ತಿಳಿಸಿದರು.

ಯಾವುದೇ ಅಭಿವೃದ್ದಿಗೆ ಸಂಬಂಧಿ ಸಿದ ವಿಷಯದಲ್ಲಿ 2,3 ಪುಟಗಳ ಅಂಕಿ-ಸಂಖ್ಯೆಗಳನ್ನೊಳಗೊಂಡ ವರದಿಯನ್ನು  ಸಭೆಗೆ ನೀಡಿ ಸುಮ್ಮನೆ ಕೂರದೇ ಆ ವಿಷಯದಲ್ಲಿ ನಿರಂತರ ಗಮನ ಹರಿಸಿ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಜಾಬ್‌ ಕಾರ್ಡ್‌ ನೀಡುವುದರ ಮೂಲಕ ಗುಳೆ ಸಮಸ್ಯೆ ನಿಯಂತ್ರಣ ಮಾಡಲಾಗಿದೆ.

ಪ್ರಸಕ್ತ ಹಂಗಾಮಿನಲ್ಲಿ ರಸಗೊಬ್ಬರಗಳ ಕೊರತೆ ಇಲ್ಲ. ಜಿಲ್ಲೆಯಾದ್ಯಂತ 20 ಹೋಬಳಿಗಳಿಗೆ ಒಂದರಂತೆ 20 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಮುಂಬರುವ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಪಾಸಿಂಗ್ ಪ್ಯಾಕೇಜ್ ಮೂಲಕ ವಿಶೇಷ ತರಗತಿ ತೆಗೆದುಕೊಳ್ಳಲಾಗುತ್ತಿದೆ ಎಂದು ವಿವಿಧ ಇಲಾಖಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಪ್ರಭುಗೌಡ ಸಿ.ದೇಸಾಯಿ, ಜಿಲ್ಲಾ ಯೋಜನಾಧಿಕಾರಿ ದಶವಂತ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT