ವಿಶ್ವಕರ್ಮ ಜಯಂತಿ; ಪೂರ್ವಭಾವಿ ಸಭೆ ನಾಳೆ

7
ವಿಜಯಪುರದಲ್ಲಿ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ವಿಶ್ವಕರ್ಮ ಜಯಂತಿ; ಪೂರ್ವಭಾವಿ ಸಭೆ ನಾಳೆ

Published:
Updated:

ವಿಜಯಪುರ: ರಾಜ್ಯ ಮಟ್ಟದ 10ನೇ ವಿಶ್ವಕರ್ಮ ಜಯಂತಿಯನ್ನು ಸೆ 30ರಂದು ವಿಜಯಪುರದಲ್ಲಿ ಆಚರಿಸಲಿದ್ದು, ಇದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಇದೇ 12ರ ಭಾನುವಾರ ನಗರದ ಗುರುಸಂಗನಬಸವ ಮಂಗಲ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ವಿಶ್ವಕರ್ಮ ಸಮಾಜದ ಮುಖಂಡ ಸಂಗಮೇಶ ಬಡಿಗೇರ ತಿಳಿಸಿದರು.

ಜಯಂತಿಗೆ ರಾಜ್ಯದ ವಿವಿಧೆಡೆಯಿಂದ ಕನಿಷ್ಠ 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಸಕಲ ವ್ಯವಸ್ಥೆ, ಸೂಕ್ತ ಸ್ಥಳ ಗುರುತಿಸುವಿಕೆ ಸೇರಿದಂತೆ ಇನ್ನಿತರೆ ವಿಷಯಗಳಿಗೆ ಸಂಬಂಧಿಸಿದಂತೆ ಈ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಶುಕ್ರವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸಮಾಜದ ಮುಖಂಡ, ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಭೆಯ ರೂಪುರೇಷೆಗಳ ಕುರಿತು ಸಮಾಲೋಚನೆ ನಡೆಸಲಾಗುವುದು. ಉತ್ತರ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಪದಾಧಿಕಾರಿಗಳು ಈ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಸಲಹೆ-ಸೂಚನೆ ನೀಡಲಿದ್ದಾರೆ ಎಂದರು.

ವಿಶ್ವಕರ್ಮ ಸಮಾಜದ ಮಹೇಂದ್ರ ಸ್ವಾಮೀಜಿ, ನಾಗೇಂದ್ರ ಸ್ವಾಮೀಜಿ, ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ (ಬಾಳು), ಮುಖಂಡರಾದ ಪ್ರಮೋದ ಬಡಿಗೇರ, ರವೀಂದ್ರ ಗಿರಗಾಂವಕರ, ಶ್ರೀಕಾಂತ ಕುಂದಣಗಾರ, ಸಂತೋಷ ವಿಶ್ವಕರ್ಮ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !