ವಿವೇಕಾನಂದರು ಸಾರ್ವಕಾಲಿಕ ಆದರ್ಶ ವ್ಯಕ್ತಿ

7

ವಿವೇಕಾನಂದರು ಸಾರ್ವಕಾಲಿಕ ಆದರ್ಶ ವ್ಯಕ್ತಿ

Published:
Updated:
Prajavani

ಚನ್ನಪಟ್ಟಣ: ಸ್ವಾಮಿ ವಿವೇಕಾನಂದರು ಯುವಜನತೆಗೆ ಸಾರ್ವಕಾಲಿಕ ಆದರ್ಶ ವ್ಯಕ್ತಿಯಾಗಿದ್ದಾರೆ ಎಂದು ಚಿಂತಕ ಧನಂಜಯ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದರ 150 ನೇ ವರ್ಷದ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿಶ್ವಮಟ್ಟದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ವಿವೇಕಾನಂದರ ತತ್ವಾದರ್ಶಗಳನ್ನು ಪಾಲಿಸಲು ಯುವಜನತೆ ಮುಂದಾಗಬೇಕು ಎಂದು ಕರೆ ನೀಡಿದರು.

ಷಿಕಾಗೊದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಅವರು ಮಾಡಿದ ಭಾಷಣ ಇಡೀ ವಿಶ್ವದ ಗಮನವನ್ನು ಭಾರತದ ಕಡೆಗೆ ಸೆಳೆಯುವಂತೆ ಮಾಡಿತ್ತು. ಬಾಲ್ಯದಿಂದಲೆ ವಿಭಿನ್ನವಾಗಿ, ವಿಶಿಷ್ಟವಾಗಿ ಬೆಳೆದಂತಹ ಸ್ವಾಮಿ ವಿವೇಕಾನಂದರ ಜೀವನ ದೇಶದ ಪ್ರತಿಯೊಬ್ಬರಿಗೂ ಮಾದರಿ. ಅಂತಹ ವೀರಸನ್ಯಾಸಿಯ ವಿಚಾರಧಾರೆಗಳು ಎಂದಿಗೂ ಅಜರಾಮರ ಎಂದರು.

ಲಾವಣಿ ಗಾಯಕ ದೊಡ್ಡಮಳೂರಿನ ಪುಟ್ಟಸ್ವಾಮಿಗೌಡ ಮಾತನಾಡಿ, ಕನ್ನಡ ನಾಡು ನುಡಿಯ ಬಗ್ಗೆ ಎಲ್ಲರು ಗೌರವ ಬೆಳೆಸಿಕೊಳ್ಳಬೇಕು ಎಂದರು.

ನಾಡಿಗೆ ಒದಗಿರುವ ಸಮಸ್ಯೆಗಳನ್ನು ಪರಿಹಾರ ಮಾಡಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳು ಆಂಗ್ಲ ವ್ಯಾಮೋಹಕ್ಕೆ ಒಳಗಾಗದೆ ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು. ಕನ್ನಡ ಭಾಷೆಯನ್ನು ಮಾತನಾಡಬೇಕು. ಇತರರಿಗೂ ಆ ಭಾಷೆ ಕಲಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ವೆಂಕಟೇಶ್ ಮಾತನಾಡಿ, ಕನ್ನಡ ನಾಡು ನುಡಿಗೆ ಇಂದು ಹಲವಾರು ಸಮಸ್ಯೆಗಳು ಬಂದೊದಗಿವೆ. ಅವುಗಳ ಪರಿಹಾರಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು. ಬೇರೆ ಭಾಷೆಗಳ ವ್ಯಾಮೋಹಕ್ಕೆ ಒಳಗಾಗದೆ ಮಾತೃಭಾಷೆಯ ಬೆಳವಣಿಗೆಗೆ ಕೊಡುಗೆ ನೀಡಬೇಕು ಎಂದರು.

ಗಾಯಕ ಪುಟ್ಟಸ್ವಾಮಿಗೌಡ ಅವರನ್ನು ಸನ್ಮಾನಿಸಲಾಯಿತು. ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ. ಮಧುಸೂದನಾಚಾರ್ಯ ಜೋಶಿ, ಪ್ರೊ. ಪದ್ಮನಾಭ ಇದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !