ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಜಿಲ್ಲೆಯಲ್ಲಿ ಇದ್ದಾರೆ 14,41,066 ಮತದಾರರು

ಮತದಾರರ ಪಟ್ಟಿ ಪರಿಷ್ಕರಣೆ ಜಿಲ್ಲಾ ನೋಡಲ್ ಅಧಿಕಾರಿ ಡಾ.ಶಾಲಿನಿ ರಜನೀಶ್ ಮಾಹಿತಿ
Last Updated 6 ಡಿಸೆಂಬರ್ 2019, 12:29 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಅಂತಿಮ ಹಂತದಲ್ಲಿದೆ.ಪ್ರಸ್ತುತ 14,41,066 ಮತದಾರರು ಹೆಸರು ನೋಂದಾಯಿಸಿದ್ದಾರೆ. ಕರಡು ಮತದಾರರ ಪಟ್ಟಿ ಶೀಘ್ರ ಪ್ರಕಟಿಸಲಾಗುವುದು ಎಂದು ಮತದಾರರ ಪಟ್ಟಿ ಪರಿಷ್ಕರಣೆ ಜಿಲ್ಲಾ ನೋಡಲ್ ಅಧಿಕಾರಿ ಡಾ.ಶಾಲಿನಿ ರಜನೀಶ್ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಅಧಿಕಾರಿಗಳು,ರಾಜಕೀಯ ಪಕ್ಷಗಳ ಪ್ರತಿನಿಧಿಗಗಳ ಸಭೆಯಲ್ಲಿ ಅವರು ಮಾತನಾಡಿದರು.

ಹಿಂದಿನ ಮತದಾರರ ಪಟ್ಟಿಗಿಂತ ಶೇ 3ರಷ್ಟು ಹೆಚ್ಚಳವಾಗಿದೆ.ಪರಿಷ್ಕರಣೆ ಅವಧಿಯಲ್ಲಿ ಸ್ವೀಕರಿಸಲಾಗಿರುವ 23,470 ಅರ್ಜಿಗಳನ್ನು ವಿಲೇವಾರಿ ಮಾಡಲು ಬಾಕಿ ಇವೆ.ಪರಿಷ್ಕರಣೆ ಅವಧಿಯಲ್ಲಿ ಯುವ ಮತದಾರರ ನೋಂದಣಿಗೆ ಹೆಚ್ಚಿನ ಒತ್ತು ನೀಡಲಾಗಿದೆ. 2011ರ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 17ರಿಂದ 18ರ ಒಳಗಿನ 72 ಸಾವಿರ ಯುವಕ, ಯುವತಿಯರು ಇದ್ದಾರೆ. ಪ್ರಸ್ತುತ 37ಸಾವಿರ ನೋಂದಣಿ ಮಾಡಲಾಗಿದೆ. ಬಾಕಿ ಉಳಿದಿದ ವಿದ್ಯಾರ್ಥಿಗಳನ್ನು ಗುರುತಿಸಿ ಹೆಸರು ನೋಂದಾಯಿಸಲುಪ್ರತಿ ಕಾಲೇಜಿನವಿದ್ಯಾರ್ಥಿಗಳ ವಿವರ ಸಲ್ಲಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ 20ರಿಂದ 29ವರ್ಷದ ಒಳಗಿನ 3.36 ಲಕ್ಷ ಜನರಿದ್ದಾರೆ. 2.97 ಲಕ್ಷ ನೋಂದಾಯಿಸಲಾಗಿದೆ ಎಂದುವಿವರ ನೀಡಿದರು.

ಮತದಾರರ ಪಟ್ಟಿಯ ಅಂತಿಮ ಕರಡು ಪ್ರಕಟಿಸುವ ಪೂರ್ವದಲ್ಲಿ ತಹಶೀಲ್ದಾರ್ ಅವರು ಎಲ್ಲಾ ಬಿಎಲ್‍ಒಗಳು ಮತ್ತು ಬೂತ್ ಮಟ್ಟದ ಏಜೆಂಟರ ಸಭೆ ಕರೆಯುತ್ತಾರೆ. ತಿದ್ದುಪಡಿಗಳು ಇದ್ದರೆ ಅಲ್ಲಿಯೇ ಸರಿಪಡಿಸುವಂತೆ ಸೂಚಿಸಲಾಗಿದೆ. ಕರಡು ಪಟ್ಟಿ ಪ್ರಕಟಣೆ ಬಳಿಕ ಸಹ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಒಂದು ಕುಟುಂಬದ ಎಲ್ಲಾ ಸದಸ್ಯರೂ ಒಂದೇ ಮತಗಟ್ಟೆಯಲ್ಲಿ ಮತ ಚಲಾಯಿಸಲು ಅವಕಾಶ ಇರಬೇಕು.ಬೇರೆ ಬೇರೆ ಬೂತ್‍ಗಳಿಗೆ ತೆರಳಬೇಕಾದ ಪರಿಸ್ಥಿತಿ ಎದುರಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಮತದಾರರು ಚುನಾವಣೆ ದಿನದವರೆಗೆ ಕಾಯದೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುದೃಢಪಡಿಸಿಕೊಳ್ಳಲು1950 ಸಂಖ್ಯೆಗೆ ಕರೆ ಮಾಡಬಹುದು. 6 ತಿಂಗಳಿಗಿಂತಹೆಚ್ಚು ಸಮಯ ಆವಿಳಾಸದಲ್ಲಿ ಇಲ್ಲದಿದ್ದರೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕುವ ಸಾಧ್ಯತೆಇದೆ. ಅಂಥವರು ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಕೋರಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತಿ ಸಿಇಒ ಎಂ.ಎಲ್.ವೈಶಾಲಿ, ನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT