ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

 ಅಕ್ರಮ ಆಸ್ತಿ ಗಳಿಕೆ ಆರೋಪ: ಸೇವೆಯಿಂದ ವಾರ್ಡನ್ ಅಮಾನತು

Last Updated 18 ಡಿಸೆಂಬರ್ 2018, 11:06 IST
ಅಕ್ಷರ ಗಾತ್ರ

ರಾಮನಗರ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಗುರಿಯಾಗಿರುವ ಕನಕಪುರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ಜೂನಿಯರ್‌ ವಾರ್ಡನ್ ಬಿ. ನಟರಾಜು ಸೇವೆಯಿಂದ ಅಮಾನತುಗೊಂಡಿದ್ದಾರೆ.

‘ನಟರಾಜು ಮತ್ತು ಅವರ ಕುಟುಂಬದವರು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದು, ₨250 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿ ಸಂಪಾದನೆ ಮಾಡಿದ್ದಾರೆ’ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ದೂರು ದಾಖಲಿಸಿದ್ದರು. ಈ ಕುರಿತು ಭ್ರಷ್ಟಾಚಾರ ನಿಗ್ರಹ ದಳವು ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು.

ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರವಿಕುಮಾರ್ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೂ ದೂರು ನೀಡಿದ್ದರು. ಮೇಲ್ನೋಟಕ್ಕೆ ಆರೋಪದಲ್ಲಿ ಸತ್ಯಾಂಶ ಕಂಡು ಬಂದ ಹಿನ್ನೆಲೆಯಲ್ಲಿ, ಕರ್ನಾಟಕ ನಾಗರಿಕ ಸೇವಾ ನಿಯಮ–1957 ಅಡಿ ಎಸಿಬಿ ತನಿಖೆ ಪೂರ್ಣಗೊಳ್ಳುವವರೆಗೆ ನಟರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT