ಸೋಮವಾರ, ಜನವರಿ 27, 2020
27 °C

ಶಿವಮೊಗ್ಗ: ಇಂದಿನಿಂದ ಭದ್ರಾ ನಾಲೆಗಳಿಗೆ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಭದ್ರಾ ಜಲಾಶಯದಿಂದ ಎಡದಂಡೆ ನಾಲೆಗೆ ಜ.7 ರಂದು ಮತ್ತು ಬಲದಂಡೆ ನಾಲೆಗೆ 8ರ ಮಧ್ಯರಾತ್ರಿಯಿಂದಲೇ ನೀರು ಹರಿಸಲು ಕರ್ನಾಟಕ ನೀರಾವರಿ ನಿಗಮ ಸೂಚಿಸಿದೆ.

ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಬೇಸಿಗೆ ಹಂಗಾಮಿನ ಬೆಳೆಗಳಿಗೆ, ಆನವೇರಿ ಶಾಖಾ ನಾಲೆ, ದಾವಣಗೆರೆ ಶಾಖಾ ನಾಲೆ, ಮಲೇಬೆನ್ನೂರು ಶಾಖಾ ನಾಲೆ, ದೇವರ ಬೆಳಕೆರೆ ಪಿಕಪ್ ಮತ್ತು ಹರಿಹರ ಶಾಖಾ ನಾಲೆಗಳಲ್ಲಿ ಮೇ 5ರ ವರೆಗೂ ಅಂದರೆ 120 ದಿನಗಳ ಕಾಲ ನಾಲೆಗಳಲ್ಲಿ ನೀರು ಹರಿಯಲಿದೆ.

ಇದರಿಂದ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ 1,02,504 ಹೆಕ್ಟೇರ್ ಪ್ರದೇಶದ ಭತ್ತ, ಕಬ್ಬು, ತೋಟಗಳು ಹಾಗೂ ಅರೆ ನೀರಾವರಿ ಬೆಳೆಗಳಿಗೆ ಅನುಕೂಲವಾಗಲಿದೆ. ವಿತರಣಾ ನಾಲೆಗಳಲ್ಲಿ ಅನುಸರಿಸಬೇಕಾದ ಆಂತರಿಕ ಸರದಿಯನ್ನು ಕಾರ್ಯಪಾಲಕ ಎಂಜಿನಿಯರ್‌ ನಿರ್ಧರಿಸಲಿದ್ದಾರೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು