ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಭಾರಿ ಮಳೆ, ಸುವರ್ಣಾವತಿ ಜಲಾಶಯದಿಂದ ನೀರು ಬಿಡುಗಡೆ

Last Updated 14 ನವೆಂಬರ್ 2021, 11:31 IST
ಅಕ್ಷರ ಗಾತ್ರ

ಚಾಮರಾಜನಗರ: ನೆರೆಯ ತಮಿಳುನಾಡು ಹಾಗೂ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಸುವರ್ಣಾವತಿ ಜಲಾಶಯ ತುಂಬಿದ್ದು, ಭಾನುವಾರ ನೀರನ್ನು ಹೊರಕ್ಕೆ ಬಿಡಲಾಗಿದೆ.

ಜಲಾಶಯದ ಗರಿಷ್ಠ ಮಟ್ಟ 2,455 ಅಡಿ ಆಗಿದೆ. ಈಗಾಗಲೇ ನೀರಿನ ಮಟ್ಟ 2,454 ಅಡಿ ತಲುಪಿದೆ ಹಾಗಾಗಿ ನೀರನ್ನು ಹೊರಗಡೆ ಬಿಡಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹೇಳಿದ್ದಾರೆ.

ಸುವರ್ಣಾವತಿ ಜಲಾಶಯ ಭರ್ತಿಯಾಗುವ ಹಿನ್ನೆಲೆಯಲ್ಲಿ ಜಲಾಶಯ, ನದಿಪಾತ್ರದ ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ ನೀಡಲಾಗಿದೆ.

‘ಜಲಾಶಯದಿಂದ ನೀರು ಹೊರ ಬಿಟ್ಟಿರುವುದರಿಂದ ಜಲಾಶಯದ ಅಚ್ಚುಕಟ್ಟು ಪ್ರದೇಶ ಹಾಗೂ ನದಿ ಪಾತ್ರದಲ್ಲಿ ಬರುವ ರೈತರು, ಸುತ್ತಮುತ್ತಲಿನ ಗ್ರಾಮಸ್ಥರು ಮುನ್ನೆಚ್ಚರಿಕೆಯಿಂದ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಆಸ್ತಿ-ಪಾಸ್ತಿ ಜಾನುವಾರುಗಳ ಬಗ್ಗೆ ನಿಗಾ ವಹಿಸಬೇಕು’ ಎಂದು ಕಾವೇರಿ ನೀರಾವರಿ ನಿಗಮದ ನಂಜನಗೂಡು ಕಬಿನಿ ನಾಲೆಗಳ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಮನವಿ‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT