ಪ್ರತಿಭಾವಂತರಿಗೆ ಪ್ರೋತ್ಸಾಹ ಸಾಧನೆಗೆ ದಾರಿ

7
ಸವಿತಾ ಸಮಾಜದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಗೋಪಾಲ ಭಂಡಾರಿ ಅಭಿಮತ

ಪ್ರತಿಭಾವಂತರಿಗೆ ಪ್ರೋತ್ಸಾಹ ಸಾಧನೆಗೆ ದಾರಿ

Published:
Updated:
Deccan Herald

ಶಿವಮೊಗ್ಗ: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಪುರಸ್ಕರಿಸಿದರೆ ಸಮಾಜ ತಮ್ಮ ಬೆಂಬಲಕ್ಕಿದೆ ಎಂಬ ಆತ್ಮವಿಶ್ವಾಸ ಅವರಲ್ಲಿ ಮೂಡುತ್ತದೆ. ಇನ್ನಷ್ಟು ಸಾಧನೆ ತೋರುವುದಕ್ಕೆ ಸಾಧ್ಯವಾಗುತ್ತದೆ ಎಂದು ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಪ್ರತಿಪಾದಿಸಿದರು.

ಜಿಲ್ಲಾ ಸವಿತಾ ಸಮಾಜ ನೌಕರರ ಸಂಘ ಭಾನುವಾರ ನಗರದ ಪ್ರೆಸ್‌ಟ್ರಸ್ಟ್ ಭವನದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಓದಿನ ಕಡೆಗೆ ಗಮನ ಹರಿಸಬೇಕು. ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಉನ್ನತ ಶಿಕ್ಷಣ ಪಡೆದು ಉನ್ನತಸ್ಥಾನ ಪಡೆಯಬೇಕು. ಸಮಾಜದ ಬಡವರಿಗೆ ನೆರವಾಗಬೇಕು ಎಂದು ಸಲಹೆ ನೀಡಿದರು. 

ಸಂಘಟನೆ ಬಲಗೊಳಿಸಲು ಮುಖಂಡರು ಕಾಳಜಿವಹಿಸಬೇಕು. ಮಾಹಿತಿ ಸಂವಹನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಯೊಬ್ಬರಿಗೂ ಮಾಹಿತಿ ನೀಡುವ ಕೆಲಸವಾಗಬೇಕು. ಸಂಘಟನೆ ಬಲಿಷ್ಠಗೊಳಿಸುವ ಎತ್ತರಕ್ಕೆ ಬೆಳೆಸಬೇಕು. ಆಗ ಸಮಾಜ ಸಂಪೂರ್ಣ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಡಾ.ಆರ್. ಲಕ್ಷ್ಮೀನಾರಾಯಣ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಹೆಚ್ಚಿನ ಜ್ಞಾನ ಸಂಪಾದನೆ ಮಾಡಿಕೊಳ್ಳಲು ಸಾಧ್ಯ ಎಂದರು.

ಪೋಷಕರು ಮಕ್ಕಳ ಮೇಲೆ ವಿನಾಕಾರಣ ಒತ್ತಡ ಹಾಕಬಾರದು. ಮಕ್ಕಳ ಭಾವನೆ, ಚಿಂತನೆ ಅರ್ಥಮಾಡಿಕೊಂಡು ಅದಕ್ಕೆ ಪ್ರೋತ್ಸಾಹ ನೀಡಿದರೆ ಭವಿಷ್ಯದ ಉನ್ನತಿಗೆ ಸಹಕಾರಿಯಾಗುತ್ತದೆ. ತಮ್ಮ ಮಕ್ಕಳು ಡಾಕ್ಟರ್ ಆಗಬೇಕು. ಎಂಜಿನಿಯರ್ ಆಗಬೇಕು ಎಂದು ಒತ್ತಡ ಹಾಕಬಾರದು. ಅವರ ಅಭಿರುಚಿಗೆ ತಕ್ಕಂತೆ ಉತ್ತೇಜನ ನೀಡಿದರೆ ಅವರು ಅಂದಿಕೊಂಡ ಗುರಿ ತಲುಪುತ್ತಾರೆ ಎಂದು ಕಿವಿಮಾತು ಹೇಳಿದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುನಲ್ಲಿ ಉತ್ತಮ ಸಾಧನೆ ತೋರಿದ ಸಮಾಜದ ಪ್ರತಿಭಾನ್ವಿತ ಮಕ್ಕಳನ್ನು ಪುರಸ್ಕರಿಸಲಾಯಿತು.

ಜಿಲ್ಲಾ ಸವಿತಾ ಸಮಾಜ ನೌಕರರ ಸಂಘ ಅಧ್ಯಕ್ಷ ಜಿ.ಪರಮೇಶ್, ಸಮಾಜದ ಮುಖಂಡರಾದ ಡಾ.ಜಿ. ರಘುನಂದನ್, ಡಾ.ಜಿ. ಶಿವಮೂರ್ತಿ, ಕೆ. ಮೋಹನ್, ಎಂ. ರಾಜಣ್ಣ, ಎಸ್. ರಾಮಪ್ಪ ಉಪಸ್ಥಿತರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !