ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮಹಾತ್ಮ ಗಾಂಧೀಜಿ ಅವರು ಅತಿ ಹೆಚ್ಚು ಅವಧಿ ತಂಗಿದ್ದು ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿಗಿರಿಧಾಮದಲ್ಲಿ. ಗಾಂಧೀಜಿ ಅವರ ನಂದಿ ಗಿರಿಧಾಮ ಭೇಟಿಗೆ ಈಗ 99 ವರ್ಷ.

99 ವರ್ಷಗಳ ಹಿಂದೆ ಇದೇ ಏಪ್ರಿಲ್ ತಿಂಗಳಲ್ಲಿ ಚಿಕ್ಕಬಳ್ಳಾಪುರದಲ್ಲಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿತ್ತು. ಮಹಾತ್ಮರ ಭೇಟಿ ಚಿಕ್ಕಬಳ್ಳಾಪುರದ ಇತಿಹಾಸದ ವಿಚಾರದಲ್ಲಿಯೂ ಮಹತ್ವವಾದುದು. ಇತಿಹಾಸಕಾರ ವೇಮಗಲ್ ಸೋಮಶೇಖರ್ ಅವರ ‘ನಂದಿಗಿರಿಧಾಮದಲ್ಲಿ ಮಹಾತ್ಮ ಗಾಂಧಿ’ ಕೃತಿ ನಂದಿ ಮತ್ತು ಗಾಂಧಿಯ ಭೇಟಿಯನ್ನು ಸಮಗ್ರವಾಗಿ ದಾಖಲಿಸಿದೆ. ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಗಾಂಧಿ ಅವರು ಅಂದು ನಡೆಸಿದ ಪ್ರವಾಸದ ವಿವರಗಳೂ ಇವೆ.

1927ರ ಏಪ್ರಿಲ್ನಲ್ಲಿ ಖಾದಿ ಪ್ರಚಾರಕ್ಕಾಗಿ ಗಾಂಧೀಜಿ ದಕ್ಷಿಣ ಭಾರತ ಪ್ರವಾಸ ನಡೆಸಿದ್ದರು. ಅಂಬೋಲಿಯಲ್ಲಿ ಹವಾಗುಣ ಸರಿ ಹೊಂದಿದ್ದಾಗ, ಅನಾರೋಗ್ಯಕ್ಕೆ ಒಳಗಾಗುವ ಅವರು ಸಬರಮತಿ ಆಶ್ರಮಕ್ಕೆ ಹೊರಡಲು ಮುಂದಾಗುವರು. ಈ ವೇಳೆ ಅವರ ಜತೆಯಲ್ಲಿದ್ದವರು ಈಗ ಅಲ್ಲಿ ಬಿಸಿಲು ಹೆಚ್ಚಿದೆ. ಹೋಗುವುದು ಬೇಡ ಎಂದು ಸಲಹೆ ನೀಡುತ್ತಾರೆ.

ಈ ವೇಳೆ ಸಿ.ರಾಜಗೋಪಾಲಾಚಾರಿ ಅವರು ಮುಂದಿನ ಪ್ರವಾಸ ಮೈಸೂರು ಸಂಸ್ಥಾನದಲ್ಲಿದೆ. ಅಲ್ಲಿನ ಕೋಲಾರ ಜಿಲ್ಲೆಯಲ್ಲಿರುವ ನಂದಿ ಗಿರಿಧಾಮವೇ ಮಹಾತ್ಮರ ವಿಶ್ರಾಂತಿಗೆ ಪ್ರಶಸ್ತವಾದ ಸ್ಥಳ ಎಂದು ನಿರ್ಧರಿಸುವರು. ಗಾಂಧೀಜಿ ಅವರು ಅದಕ್ಕೆ ಒಪ್ಪಿಗೆ ಸೂಚಿಸುವರು.

ಅಂಬೋಲಿಯಿಂದ ಗಾಂಧೀಜಿ ಅವರು ರೈಲಿನ ಮೂಲಕ ಬೆಳಗಾವಿ ಮಾರ್ಗವಾಗಿ ಏಪ್ರಿಲ್ 20ರಂದು ಯಶವಂತಪುರ ರೈಲು ನಿಲ್ದಾಣಕ್ಕೆ ಬಂದಿಳಿಯುವರು. ಅಲ್ಲಿಂದ ನೇರವಾಗಿ ಕಾರುಗಳಲ್ಲಿ ಪರಿವಾರದವರೊಂದಿಗೆ ನಂದಿ ಬೆಟ್ಟದ ತಪ್ಪಲಿನ ಸುಲ್ತಾನ್ ಪೇಟೆಗೆ ಬರುವರು. ಹೀಗೆ ಮೊದಲ ಬಾರಿಗೆ ಚಿಕ್ಕಬಳ್ಳಾಪುರಕ್ಕೆ ಗಾಂಧೀಜಿ ಬಂದರು.

99 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಮಹಾತ್ಮರ ಸ್ವಾಗತಕ್ಕೆ ಸಮಿತಿಗಳು ರಚನೆಯಾಗಿದ್ದವು. ಪೂರ್ವ ಸಿದ್ಧತೆಗಾಗಿ ಮಹದೇವ ದೇಸಾಯಿ, ರಾಜಗೋಪಾಲಾಚಾರಿ, ಗಂಗಾಧರ ದೇಶಪಾಂಡೆ ಅವರು ಏಪ್ರಿಲ್ ಎರಡನೇ ವಾರದಲ್ಲಿ ಬೆಂಗಳೂರಿಗೆ ಬಂದು, ಮೈಸೂರು ಸಂಸ್ಥಾನದ ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರಿಗೆ ವಿಚಾರ ತಿಳಿಸುತ್ತಾರೆ. ಬಳಿಕ ಮಹಾರಾಜರು ನಂದಿ ಗಿರಿಧಾಮ ಕನ್ನಿಂಗ್ ಹ್ಯಾಮ್ ಭವನದಲ್ಲಿ ಗಾಂಧೀಜಿ ಅವರ ವಾಸ್ತವ್ಯಕ್ಕೆ ಸಿದ್ಧತೆಗಳನ್ನು ಮಾಡಿಸುವರು.

ಚಿಕ್ಕಬಳ್ಳಾಪುರದ ಸ್ವಾಗತ ಸಮಿತಿ ಪದಾಧಿಕಾರಿಗಳು ಗಾಂಧೀಜಿ ಅವರನ್ನು ಸಡಗರದಿಂದ ಬರ ಮಾಡಿಕೊಳ್ಳುವರು. ಗಾಂಧೀಜಿ, ಕಸ್ತೂರ ಬಾ ಮತ್ತು ಹಂಜಾ ಹುಸೇನ್ ಅವರನ್ನು ಡೋಲಿಗಳಲ್ಲಿ ಕೂರಿಸಿ ಗಿರಿಧಾಮಕ್ಕೆ ಕರೆದೊಯ್ಯಲಾಗುತ್ತದೆ. ಅವರ ಜತೆ ಕಿರಿಯ ಪುತ್ರ ದೇವದಾಸ್ ಸಹ ಇದ್ದರು.

ಈ ಮೊದಲ ಭೇಟಿಯಲ್ಲಿ 45 ದಿನ ಗಿರಿಧಾಮದಲ್ಲಿ ಗಾಂಧೀಜಿ ವಾಸ್ತವ್ಯ ಹೂಡಿದ್ದರು. ಮೇ 26 ರಂದು ದಿವಾನರಾದ ಮಿರ್ಜಾ ಇಸ್ಮಾಯಿಲ್, ಸರ್.ಎಂ.ವಿಶ್ವೇಶ್ವರಯ್ಯ, ಮೀರ್ ಹಂಜಾ ಹುಸೇನ್ ಅವರು ಗಾಂಧಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಗಾಂಧೀಜಿ ಅವರು ಜೂನ್ 5 ರಂದು ಬೆಟ್ಟದಿಂದ ನಿರ್ಗಮಿಸಿದರು.

ತಮಗೆ ಯಾರೇ ಪತ್ರ ಬರೆದರೂ ಉತ್ತರಿಸುತ್ತಿದ್ದ ಗಾಂಧೀಜಿ ನಂದಿಬೆಟ್ಟದಲ್ಲಿ ವಿಶ್ರಾಂತಿಯಲ್ಲಿದ್ದರೂ ಹಲವರಿಗೆ ಪತ್ರ ಬರೆದಿದ್ದಾರೆ. ಶಂಕರನ್ (ಏಪ್ರಿಲ್ 28, 1927), ದಕ್ಷಿಣ ಆಫ್ರಿಕಾದಲ್ಲಿ ಗಾಂಧೀಜಿಯವರ ಸಹಚರರಾಗಿದ್ದ ಜರ್ಮನಿ ಮೂಲದ ಹರ್ಮನ್ ಕಾಲೆನ್ ಬಾಕ್ (ಮೇ 13, 1927) ಮತ್ತು ಗುಲ್ಜಾರಿಲಾಲ್ ನಂದ (ಮೇ 28, 1927) ಅವರಿಗೆ ಪತ್ರಗಳನ್ನು ಇಲ್ಲಿಂದ ಬರೆದಿದ್ದಾರೆ. ‘ಮಹಾತ್ಮ ಗಾಂಧಿಯವರ ಆಯ್ದ ಪತ್ರಗಳು’ ಪುಸ್ತಕದಲ್ಲಿ ಇವು ದಾಖಲಾಗಿವೆ.

ಮೊದಲ ಬಾರಿಗೆ ಗಾಂಧೀಜಿ ಗಿರಿಧಾಮಕ್ಕೆ ಭೇಟಿ ನೀಡಿದ್ದ ವೇಳೆ ತಂಗಿದ್ದ ಕನ್ನಿಂಗ್ ಹ್ಯಾಂ ಭವನಕ್ಕೆ ಸ್ವಾತಂತ್ರ್ಯದ ನಂತರ ಗಾಂಧೀಜಿ ‘ಗಾಂಧಿ ನಿಲಯ’ ಎಂದು ಮರು ನಾಮಕರಣ ಮಾಡಲಾಯಿತು.

1936ರಲ್ಲಿ ಎರಡನೇ ಭೇಟಿ

1936ರ ಮೇ ತಿಂಗಳಲ್ಲಿ ಮದರಾಸ್ ಪ್ರವಾಸದಲ್ಲಿದ್ದ ಗಾಂಧೀಜಿ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಈ ವೇಳೆ ಕೂಡ ಮಹಾತ್ಮರ ವಿಶ್ರಾಂತಿಗೆ ನಂದಿ ಗಿರಿಧಾಮವೇ ಸೂಕ್ತ ಎಂದು ಅವರ ಪರಿವಾರದವರು ನಿರ್ಧರಿಸುತ್ತಾರೆ. ಗಾಂಧೀಜಿ ಅವರು 1936ರ ಮೇ 10 ರಂದು ಬೆಂಗಳೂರಿಗೆ ಬಂದು, ಕುಮಾರಕೃಪಾ ಭವನದಲ್ಲಿ ಕೆಲ ಹೊತ್ತು ವಿಶ್ರಾಂತಿ ಪಡೆದು ಬಳಿಕ ಎರಡನೇ ಬಾರಿಗೆ ನಂದಿ ಬೆಟ್ಟದತ್ತ ಕಾರಿನಲ್ಲಿ ಪ್ರಯಾಣ ಬೆಳೆಸುತ್ತಾರೆ.

ಈ ವೇಳೆ ಗಾಂಧೀಜಿ ಅವರನ್ನು ಡೋಲಿ ಮೂಲಕ ಬೆಟ್ಟದ ಮೇಲೆ ಕರೆದೊಯ್ಯಲು ಸುಲ್ತಾನ್ ಪೇಟೆಯಲ್ಲಿ ದಿವಾನ್ ಮಿರ್ಜಾ ಇಸ್ಮಾಯಿಲ್ ಸೇರಿದಂತೆ ಅನೇಕ ಗಣ್ಯರು ಕಾಯುತ್ತಿರುತ್ತಾರೆ. ಆದರೆ ಗಾಂಧೀಜಿ ಅವರು ಬೆಟ್ಟದ ದಕ್ಷಿಣ ದಿಕ್ಕಿನಲ್ಲಿ ಕುಡುವತಿ ಗ್ರಾಮದ ಬಳಿ ಇದ್ದ ಮಣ್ಣಿನ ರಸ್ತೆ ಮೂಲಕ ಅನಾರೋಗ್ಯದ ನಡುವೆಯೇ ಕಾಲ್ನಡಿಗೆಯಲ್ಲೇ ಬೆಟ್ಟ ಏರಿದರು. ಈ ಎರಡನೇ ಭೇಟಿಯಲ್ಲಿ ಗಿರಿಧಾಮದಲ್ಲಿ 20 ದಿನಗಳು ಮಹಾತ್ಮರು ವಿಶ್ರಾಂತಿ ಪಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.