ಮಸ್ಕಿ: ಪಟ್ಟಣದಲ್ಲಿ ವಾಹನ ಸಂಚಾರವನ್ನು ಸುಗಮಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಶೋಕ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಸುಮಾರು 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ₹10 ಕೋಟಿ ವೆಚ್ಚದಲ್ಲಿ ಡಿವೈಡರ್ ಹಾಗೂ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಂಡಿದೆ. ಆದರೆ, ಇದೇ ಸಂದರ್ಭದಲ್ಲಿ ಅಮೃತ 2.0 ಹಾಗೂ ಜಲಧಾರೆ ಯೋಜನೆಯಡಿ ನೀರಿನ ಪೈಪ್ಲೈನ್ ಅಳವಡಿಕೆ ಕಾರ್ಯಗಳು ಕೂಡ ಪ್ರಾರಂಭವಾಗಿರುವುದರಿಂದ ಸಾರ್ವಜನಿಕರಿಗೆ ಅನೇಕ ಸಮಸ್ಯೆಗಳು ಎದುರಾಗಿವೆ. ಸಮನ್ವಯದ ಕೊರತೆಯಿಂದ ಒಂದೇ ರಸ್ತೆಯನ್ನು ಮರುಮರು ಅಗೆದು ಕೆಲಸ ನಡೆಸುತ್ತಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಹಿಂದೆ ಸುಮಾರು 60 ಅಡಿ ಅಗಲವಿದ್ದ ಹೆದ್ದಾರಿ ರಸ್ತೆ, ಅವೈಜ್ಞಾನಿಕ ಯೋಜನೆಯ ಪರಿಣಾಮವಾಗಿ ಡಿವೈಡರ್ ಮತ್ತು ಸರ್ವಿಸ್ ರಸ್ತೆಗಳ ನಿರ್ಮಾಣದ ನಂತರ ಸುಮಾರು 40 ಅಡಿಗೆ ಕುಂಠಿತವಾಗಿದೆ. ರಸ್ತೆ ಎರಡೂ ಬದಿಗಳಲ್ಲಿ ಸರ್ವಿಸ್ ರಸ್ತೆಗಳು ನಿರ್ಮಾಣಗೊಂಡಿದ್ದರೂ, ಇದೀಗ ಅದೇ ಮಾರ್ಗದಲ್ಲಿ ಪೈಪ್ಲೈನ್ ಅಳವಡಿಕೆ ಕಾಮಗಾರಿ ನಡೆಯುತ್ತಿರುವುದರಿಂದ ಸಂಚಾರಕ್ಕೆ ಮತ್ತಷ್ಟು ಅಡಚಣೆ ಉಂಟಾಗಿದೆ. ಕಾಮಗಾರಿ ಪ್ರಾರಂಭಿಸುವ ಮೊದಲು ಸಮಗ್ರ ಯೋಜನೆ ರೂಪಿಸದಿರುವುದು ಸಮಸ್ಯೆಗೆ ಪ್ರಮುಖ ಕಾರಣವೆಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಕುಡಿಯುವ ನೀರಿನ ವ್ಯವಸ್ಥೆಗಾಗಿ ಹೊಸದಾಗಿ ನಿರ್ಮಿಸಿದ ರಸ್ತೆ ಹಾಗೂ ಸರ್ವಿಸ್ ರಸ್ತೆಗಳನ್ನೇ ಮತ್ತೆ ಅಗೆದುಪೈಪ್ಗಳನ್ನು ಅಳವಡಿಸಲಾಗುತ್ತಿದೆ. ಪರಿಣಾಮವಾಗಿ ಎಲ್ಲೆಂದರಲ್ಲಿ ಮಣ್ಣಿನ ರಾಶಿಗಳು ಬಿದ್ದಿದ್ದು, ಡಿವೈಡರ್ ಬ್ಯಾರಿಕೇಡ್ಗಳು ಮತ್ತು ಪಾದಚಾರಿ ಮಾರ್ಗಗಳು ಹಾನಿಗೊಳಗಾಗಿವೆ. ಶಾಲಾ ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ದಿನನಿತ್ಯ ಕೆಲಸಕ್ಕೆ ತೆರಳುವವರು ರಸ್ತೆ ಬಳಸಲು ಸಂಕಷ್ಟ ಅನುಭವಿಸುತ್ತಿದ್ದಾರೆ. ಕೆಲವೆಡೆ ಪಾದಚಾರಿ ಮಾರ್ಗವೇ ಸಂಪೂರ್ಣವಾಗಿ ಮುಚ್ಚಲ್ಪಟ್ಟಿರುವುದರಿಂದ ಜನರು ರಸ್ತೆ ಮಧ್ಯದಲ್ಲೇ ನಡೆಯಬೇಕಾದ ಪರಿಸ್ಥಿತಿ ಉಂಟಾಗಿದೆ.

ಇದರ ನಡುವೆಯೇ ಬೀದಿ ವ್ಯಾಪಾರಿಗಳು ಸರ್ವಿಸ್ ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸಿ ವ್ಯಾಪಾರ ನಡೆಸುತ್ತಿರುವುದು ಸಮಸ್ಯೆಯನ್ನು ಇನ್ನಷ್ಟು ಗಂಭೀರಗೊಳಿಸಿದೆ. ಮತ್ತೊಂದೆಡೆ ಕಾರುಗಳು ಮತ್ತು ದ್ವಿಚಕ್ರ ವಾಹನಗಳನ್ನು ಸರ್ವಿಸ್ ರಸ್ತೆಯಲ್ಲೇ ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚುತ್ತಿದೆ. ಸಂಚಾರ ನಿಯಂತ್ರಣದ ಕೊರತೆಯಿಂದ ಟ್ರಾಫಿಕ್ ಸಮಸ್ಯೆ ದಿನೇದಿನೇ ಗಂಭೀರವಾಗುತ್ತಿದ್ದು, ತುರ್ತು ಸೇವೆಗಳಾದ ಆಂಬ್ಯುಲೆನ್ಸ್ಗಳಿಗೂ ಅಡಚಣೆ ಉಂಟಾಗುತ್ತಿದೆ ಎಂಬ ದೂರಗಳು ಕೇಳಿಬರುತ್ತಿವೆ.

ಬೀದರ್ನಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 150 (ಎ) ಮಾರ್ಗದಲ್ಲಿ ಬರುವ ಈ ರಸ್ತೆ ಮೂಲಕ ಪ್ರತಿದಿನ ಸಾವಿರಾರು ಪ್ರಯಾಣಿಕರನ್ನು ಹೊತ್ತೊಯ್ಯುವ ಬಸ್ಸುಗಳು, ಭಾರೀ ವಾಹನಗಳು ಹಾಗೂ ನೂರಾರು ಕಾರು ಮತ್ತು ಬೈಕ್ಗಳು ಸಂಚರಿಸುತ್ತಿವೆ. ಆದರೆ ಈಗ ಕುಂಠಿತಗೊಂಡ 40 ಅಡಿ ರಸ್ತೆ ಇಷ್ಟು ವಾಹನ ಸಂಚಾರವನ್ನು ನಿಭಾಯಿಸಲು ಅಸಮರ್ಥವಾಗಿದೆ. ಇದರ ಪರಿಣಾಮವಾಗಿ ದಿನದ ಬಹುತೇಕ ಸಮಯದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಕೆಲವೊಮ್ಮೆ ಗಂಟೆಗಳ ಕಾಲ ವಾಹನಗಳು ನಿಂತುಕೊಳ್ಳುವ ಪರಿಸ್ಥಿತಿಯೂ ನಿರ್ಮಾಣವಾಗುತ್ತಿದೆ. ವ್ಯಾಪಾರಿಗಳು ತಮ್ಮ ವ್ಯವಹಾರಕ್ಕೂ ಹಾನಿ ಆಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ರಸ್ತೆ ದಾಟುವುದು ಸಹ ಅಪಾಯಕಾರಿಯಾಗಿದ್ದು, ಸಾರ್ವಜನಿಕರು ಜೀವಭಯದಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ತೋಡಿದ ಮಣ್ಣನ್ನು ರಸ್ತೆ ಮೇಲೆಯೇ ಬಿಟ್ಟುಹೋಗಿರುವುದರಿಂದ ದೂಳು ಹೆಚ್ಚಾಗಿ ಜನರು ಉಸಿರಾಟ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಂಗಡಿದಾರರು, ವಿದ್ಯಾರ್ಥಿಗಳು ಹಾಗೂ ವೃದ್ಧರು ಇದರಿಂದ ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ನಿಯಮಾನುಸಾರ ದೂಳು ಹರಡದಂತೆ ನೀರು ಸಿಂಪಡಿಸಬೇಕಾದರೂ ಗುತ್ತಿಗೆದಾರರು ಅದನ್ನು ಪಾಲಿಸುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರದ ಮೇಲೆ ಸಹ ಇದರಿಂದ ಕೆಟ್ಟ ಪರಿಣಾಮ ಉಂಟಾಗುತ್ತಿದ್ದು, ಸುತ್ತಮುತ್ತಲಿನ ನಿವಾಸಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳು, ಸಮರ್ಪಕ ಯೋಜನೆ ಮತ್ತು ನಿರ್ವಹಣೆಯ ಕೊರತೆಯಿಂದ ಅನಾನುಕೂಲಕ್ಕೆ ಕಾರಣವಾಗಿವೆ. ಸ್ಥಳೀಯರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಗಳನ್ನು ಸಮರ್ಪಕವಾಗಿ ಪೂರ್ಣಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ರಸ್ತೆ ದುರಸ್ತಿ, ದೂಳು ನಿಯಂತ್ರಣ, ಪಾದಚಾರಿ ಮಾರ್ಗಗಳ ಪುನರ್ ನಿರ್ಮಾಣ ಹಾಗೂ ಸಂಚಾರ ವ್ಯವಸ್ಥೆ ಸುಧಾರಣೆ ತಕ್ಷಣ ಕೈಗೊಳ್ಳಬೇಕು ಎಂಬುದು ಜನರ ಒತ್ತಾಯವಾಗಿದೆ.

ಮಸ್ಕಿ ಪಟ್ಟಣದಲ್ಲಿ ಸಂಚಾರ ಸುಗಮಗೊಳಿಸಲು ನಿರ್ಮಿಸಿದ ಡಿವೈಡರ್–ಸರ್ವಿಸ್ ರಸ್ತೆ ಯೋಜನೆ ನಿರೀಕ್ಷಿತ ಫಲ ನೀಡಿಲ್ಲ. ಅದೇ ರಸ್ತೆಯಲ್ಲಿ ಜಲಧಾರೆ ಹಾಗೂ ಅಮೃತ ಯೋಜನೆಯ ಪೈಪ್ ಅಳವಡಿಕೆ ಕಾಮಗಾರಿ ನಡೆಯುತ್ತಿರುವುದರಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೊಸದಾಗಿ ನಿರ್ಮಿಸಿದ ರಸ್ತೆಯನ್ನು ಮರು ಅಗೆದರೂ, ಅದನ್ನು ಸರಿಪಡಿಸಲು ಗುತ್ತಿಗೆದಾರರು ಮುಂದಾಗದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಹಾಳಾದ ರಸ್ತೆಯನ್ನು ಸರಿಪಡಿಸಿ ಸಂಚಾರಕ್ಕೆ ಸುರಕ್ಷಿತ ವ್ಯವಸ್ಥೆ ಕಲ್ಪಿಸಬೇಕು
ವಿಜಯ ಬಡಿಗೇರ್, ರೈತ ಸಂಘದ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.