ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿವಿಎಸ್ ಕಾಲೇಜು: ಇಂದು ರಾಷ್ಟ್ರೀಯ ವಿಚಾರ ಸಂಕಿರಣ

Last Updated 14 ಫೆಬ್ರುವರಿ 2020, 13:08 IST
ಅಕ್ಷರ ಗಾತ್ರ

ಶಿವಮೊಗ್ಗ:ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿಫೆ.15ರಂದು ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ.

ಕರ್ನಾಟಕ ರಾಜ್ಯ ಆರ್ಥಿಕ ಪರಿಷತ್, ಕುವೆಂಪುವಿಶ್ವವಿದ್ಯಾಲಯ,ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜುಸಹಯೋಗದಲ್ಲಿ ಆಯೋಜಿಸಿರುವ ವಿಚಾರ ಸಂಕಿರಣವನ್ನು ಅಂದು ಬೆಳಿಗ್ಗೆ9.30ಕ್ಕೆ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಪಿ.ವೀರಭದ್ರಪ್ಪ ಉದ್ಘಾಟಿಸುವರು ಎಂದು ಸಂಸ್ಥೆಯ ಉಪಾಧ್ಯಕ್ಷ ಡಾ.ನಾರಾಯಣರಾವ್ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ದಾವಣಗೆರೆವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ.ಹಲಸೆ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರೊ.ಕೆ.ಸಿ.ವೀರಭದ್ರಯ್ಯ, ಡಿವಿಎಸ್ ಸಮಿತಿ ಅಧ್ಯಕ್ಷ ಕೆ.ಬಸಪ್ಪಗೌಡ ಉಪಸ್ಥಿತರಿರುವರು.ವಿಚಾರ ಸಂಕಿರಣದಲ್ಲಿ ಎರಡು ಗೋಷ್ಠಿಗಳು ನಡೆಯಲಿವೆ. ದೆಹಲಿಯ ರಾಷ್ಟ್ರೀಯ ಹಣಕಾಸು ಮತ್ತು ನೀತಿ ಸಂಸ್ಥೆಯ ಡಾ.ಎನ್.ಗೋವಿಂದರಾವ್, ಕುವೆಂಪು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರೊ.ಆರ್.ಗಣೇಶ್, ಡಾ.ಸಿ.ಕೆ.ರೇಣುಕಾಚಾರ್ಯ ಭಾಗವಹಿಸುವರು. ತಿರುಪತಿ ವಿಶ್ವವಿದ್ಯಾಲಯದ ಡಾ.ಕೆ.ಎಂ.ನಾಯ್ಡು, ಧಾರವಾಡ ವಿಶ್ವವಿದ್ಯಾಲಯದ ಡಾ.ಎಸ್.ಟಿ.ಬಾಗಲಕೋಟಿ, ಮಂಗಳೂರು ವಿಶ್ವವಿದ್ಯಾಲಯದ ಡಾ.ಶ್ರೀಪತಿ ಕಲ್ಲೂರಾಯ, ಬೆಂಗಳೂರು ವಿಶ್ವವಿದ್ಯಾಲಯದ ಡಾ.ಪುಟ್ಟಸ್ವಾಮಯ್ಯ, ಡಾ.ಶ್ರೀನಿವಾಸ ಗೌಡ, ಬಳ್ಳಾರಿ ವಿಶ್ವವಿದ್ಯಾಲಯದ ಡಾ.ತುಳಸಿಮಾಲ ವಿಚಾರ ಮಂಡಿಸುವರು ಎಂದರು.

ಡಿವಿಎಸ್ ಕಾಲೇಜಿನ ಪ್ರಾಂಶುಪಾಲ ಎಚ್.ಟಿ.ಕೃಷ್ಣಮೂರ್ತಿಮಾತನಾಡಿ, ರಾಜ್ಯ ಆರ್ಥಿಕ ಪರಿಷತ್ ವಿನೂತನ ಸಂಸ್ಥೆ. ಅರ್ಥಶಾಸ್ತ್ರ ಅಧ್ಯಯನವನ್ನು ಪರಿಣಾಮಕಾರಿಯಾಗಿ ರೂಪಿಸುವುದು. ಜನಪರ ಸಂಶೋಧನೆಗಳಿಗೆ ಉತ್ತೇಜನ ನೀಡುವುದು. ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಜಾಗತಿಕ ಮಟ್ಟದಲ್ಲಿ ಆರ್ಥಿಕ ಸಮಸ್ಯೆಗಳನ್ನು ಅವಲೋಕಿಸಿ, ಪರಿಹಾರ ಸೂಚಿಸುವುದು. ಸರ್ಕಾರದ ಅಭಿವೃದ್ಧಿ ಯೋಜನೆಗಳ ಮೌಲ್ಯಮಾಪನ ಮಾಡುವ ಹಲವು ಕಾರ್ಯಕ್ರಮ ರೂಪಿಸುತ್ತಿದೆ.ಇದಕ್ಕೆ ಪೂರಕವಾಗಿ ಈ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಟಿ.ಎಚ್.ಕೃಷ್ಣಮೂರ್ತಿ,ಡಾ.ಪ್ರಭುದೇವ್, ಎಂ.ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT