ನಾರಾಯಣಪುರ: ಇಲ್ಲಿನ ಬಸವಸಾಗರ ಜಲಾಶಯದ 30 ಕ್ರಸ್ಟ್‌ಗೇಟ್‌ಗಳಿಂದ 1.78 ಲಕ್ಷ ಕ್ಯುಸೆಕ್ ನೀರುಕೃಷ್ಣಾ ನದಿಗೆ ಹರಿಬಿಡಲಾಗಿದೆ. ಪಶ್ಚಿಮಘಟ್ಟ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಆಗುತ್ತಿರುವುದರಿಂದ ಬಸವಸಾಗರ ಜಲಾಶಯಕ್ಕೆ ನಿರಂತರವಾಗಿ ನೀರು ಹರಿದು ಬರುತ್ತಿದ್ದು, ಒಳಹರಿವನ್ನು ಗಮನಿಸಿ ಕೃಷ್ಣಾನದಿಗೆ ನೀರು ಹರಿಸಲಾಗುತ್ತಿದೆ.