ಪಶ್ಚಿಮಘಟ್ಟ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆ ಆಗುತ್ತಿರುವದರಿಂದ ಒಳಹರಿವು ಕಡಿಮೆಯಾಗುತ್ತಿದೆ. ಬಸವ ಸಾಗರ ಜಲಾಶಯಕ್ಕೆ ಬರುತ್ತಿರುವ ಒಳಹರಿವನ್ನು ಗಮನಿಸಿ ಹೊರಹರಿವನ್ನು ಕಡಿಮೆ ಮಾಡಲಾಗುತ್ತಿದೆ. ಸೋಮವಾರ ಆಲಮಟ್ಟಿಯ ಶಾಸ್ತ್ರೀ ಜಲಾಶಯದಿಂದ ಬಸವಸಾಗರ ಜಲಾಶಯಕ್ಕೆ 2.10 ಲಕ್ಷ ಕ್ಯುಸೆಕ್ ನೀರು ಹರಿಬಿಡಲಾಗಿದೆ.