ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾನದಿಗೆ 1 ಟಿಎಂಸಿ ನೀರು ಬಿಡುಗಡೆ

Published 2 ಮೇ 2024, 14:02 IST
Last Updated 2 ಮೇ 2024, 14:02 IST
ಅಕ್ಷರ ಗಾತ್ರ

ನಾರಾಯಣಪುರ: ಬಸವಸಾಗರ ಜಲಾಶಯದಿಂದ ಬುಧವಾರ ರಾತ್ರಿ ಅಣೆಕಟ್ಟಿನ ಎರಡು  ಕ್ರಸ್ಟಗೇಟ್‌ಗಳನ್ನು ತೆರೆದು 6,400 ಕ್ಯುಸೆಕ್ ಹಾಗೂ ಮುರಡೇಶ್ವರ ಜಲವಿದ್ಯುತ್ ಸ್ಥಾವರದ ಮೂಲಕ 4 ಸಾವಿರ ಕ್ಯುಸೆಕ್ ಸೇರಿ ಒಟ್ಟು 10,400 ಕ್ಯುಸೆಕ್‌ ನೀರನ್ನು ಕೃಷ್ಣಾ ನದಿ ಪಾತ್ರಕ್ಕೆ ಹರಿಬಿಡಲಾಗುತ್ತಿದೆ ಎಂದು ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ ಆರ್.ಮಂಜುನಾಥ ತಿಳಿಸಿದರು.

ಕಲಬುರಗಿ ಪ್ರಾದೇಶಿಕ ಆಯುಕ್ತರ ನಿರ್ದೇಶನದಂತೆ ರಾಯಚೂರು ನಗರ ಹಾಗೂ ಸುರಪುರ ನಗರಕ್ಕೆ ಕುಡಿಯುವ ನೀರು ಪೂರೈಕೆಗಾಗಿ 1 ಟಿಎಂಸಿ ಅಡಿ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ. ಆಯಾ ನಗರಗಳಿಗೆ ಉದ್ದೇಶಿತ ನೀರು ತಲುಪಿ ನದಿ ತೀರದ ನೀರಿನ ಸ್ಥಾವರಗಳಿಂದ ನಗರಗಳಿಗೆ ನೀರು ಪೂರೈಕೆ ಮಾಡಿ ಸಾರ್ವಜನಿಕರಿಗೆ ಕುಡಿಯಲು ನೀರು ಬಳಕೆಯಾಗಲಿದೆ. ನಿಗದಿಪಡಿಸಿದ 1 ಟಿಎಂಸಿ ಅಡಿ ನೀರು ಗುರುವಾರ ರಾತ್ರಿ ವೇಳೆಗೆ ಪೂರ್ಣಗೊಳ್ಳಲಿದ್ದು, ನಂತರದಲ್ಲಿ ನದಿ ಪಾತ್ರಕ್ಕೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT