ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಾದಗಿರಿ | ಲಂಚ: ಪ್ರಭಾರ ಬಿಒಇಗೆ 1 ವರ್ಷ ಜೈಲು

Published 12 ಏಪ್ರಿಲ್ 2024, 15:22 IST
Last Updated 12 ಏಪ್ರಿಲ್ 2024, 15:22 IST
ಅಕ್ಷರ ಗಾತ್ರ

ಯಾದಗಿರಿ: ಶಾಲೆಯಿಂದ ಹೊರಗೆ ಉಳಿದ ಮಕ್ಕಳಿಗೆ ಶಿಕ್ಷಣ ನೀಡಲು ಲಂಚ ಪಡೆಯುಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ ಸಾರ್ವಜನಿಕ ಶಿಕ್ಷಣಾ ಇಲಾಖೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಆಗಿದ್ದ ವೆಂಕಯ್ಯ ಬಸವರಾಜ ಇನಾಮಾದಾರ ಅವರಿಗೆ 1 ವರ್ಷ ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಲಾಗಿದೆ.

ವಿಶೇಷ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶೆ ಬಿ.ಎಸ್.ರೇಖಾ ಆದೇಶಿಸಿದ್ದಾರೆ.

2011ರ ಜುಲೈ 28 ರಂದು ₹5,000 ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು.

ವಡಗೇರಾ ತಾಲ್ಲೂಕಿನ ಬಿಳ್ಹಾರ ಗ್ರಾಮದ ಸದಾಶಿವರೆಡ್ಡಿ ಬಸವರಾಜಪ್ಪ ಪಾಟೀಲ ದೂರು ನೀಡಿದ್ದರು. ಲೋಕಾಯುಕ್ತ ಪರವಾಗಿ ವಿಶೇಷ ಸರ್ಕಾರಿ ಅಭೀಯೋಜಕ ಪಿ.ಶಿವರಾಜ ಉಳ್ಳೆಸೂಗೂರು ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT