ಶನಿವಾರ, ಜುಲೈ 24, 2021
27 °C

ಯಾಳಗಿ: ವಾಂತಿ ಭೇದಿ, 10 ಜನ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾಳಗಿ (ಕೆಂಭಾವಿ): ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ ವಾಂತಿ, ಭೇದಿಯಾಗಿ 10 ಮಂದಿ ಭಾನುವಾರ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದಾರೆ.

‘ಒಬ್ಬ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಆಸ್ಪತ್ರೆಗೆ ಕಳಿಸಲಾಗಿದೆ. ಉಳಿದವರಿಗೆ ಇಲ್ಲಿಯೇ ಚಿಕಿತ್ಸೆ ಮುಂದುವರಿದಿದ್ದು, ಪ್ರಾಣಾಪಾಯವಿಲ್ಲ’ ಎಂದು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ ಕುಲಕರ್ಣಿ ತಿಳಿಸಿದರು.

‘ಯಾಳಗಿ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವು ಸೌಕರ್ಯ ಕೊರತೆ ಎದುರಿಸುತ್ತಿದೆ. ವೈದ್ಯರು ಸಕಾಲಕ್ಕೆ ಬರುವುದಿಲ್ಲ. ಹೀಗಾಗಿ ರೋಗಿಗಳನ್ನು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ’ ಎಂದು ಕರವೇ ಮುಖಂಡ ರಾಮನಗೌಡ ಹೊಸಮನಿ ತಿಳಿಸಿದರು.

‘ಗ್ರಾಮದ ಹಲವೆಡೆ ಪೂರೈಕೆಯಾಗುವ ನಲ್ಲಿ ನೀರು ಕಲುಷಿತವಾಗಿದ್ದು, ಅದನ್ನು ಕುಡಿದು ನಾಲ್ಕು ದಿನಗಳಿಂದ ಜನರ ಆರೋಗ್ಯ ಹದಗೆಟ್ಟಿದೆ’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಆದರೆ, ಇದನ್ನು ಅಲ್ಲಗಳೆದಿರುವ ಪಂಚಾಯಿತಿ ಅಧಿಕಾರಿಗಳು, ‘ಗ್ರಾಮದಲ್ಲಿ ಅಕ್ರಮವಾಗಿ ಮೀನು ಮಾರಲಾಗುತ್ತಿದ್ದು, ತಿನ್ನಲು ಯೋಗ್ಯವಲ್ಲದ ಮೀನುಗಳನ್ನು ಸೇವಿಸಿ ಗ್ರಾಮಸ್ಥರ ಆರೋಗ್ಯ ಹಾಳಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು