ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯಿತಿ ಚುನಾವಣೆಗೆ 102 ನಾಮಪತ್ರ ಸಲ್ಲಿಕೆ: ರಜಪೂತ

Last Updated 9 ಡಿಸೆಂಬರ್ 2020, 16:19 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಅಭ್ಯರ್ಥಿಗಳಿಂದ ಬುಧವಾರ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ 102 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಶಹಾಪುರ, ಸುರಪುರ, ಹುಣಸಗಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಜರುಗಲಿದೆ. ಶಹಾಪುರ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ 11, ಸುರಪುರ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ 31, ಹುಣಸಗಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ 60ಸೇರಿದಂತೆ102 ಸಲ್ಲಿಕೆಯಾಗಿವೆಎಂದು ತಿಳಿಸಿದ್ದಾರೆ.

ಹುಣಸಗಿ–60 ನಾಮಪತ್ರ ಸಲ್ಲಿಕೆ: ಹುಣಸಗಿ ತಾಲ್ಲೂಕಿನ 10 ಗ್ರಾಮ ಪಂಚಾಯಿತಿಗಳಲ್ಲಿ ಬುಧವಾರ 60 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ತಹಶೀಲ್ದಾರ್ ಕಚೇರಿಯ ಮೂಲಗಳು ತಿಳಿಸಿವೆ.

ಹೆಬ್ಬಾಳ (ಬಿ)-2, ಕಾಮನಟಗಿ-1, ಗೆದ್ದಲಮರಿ– 2, ಬೈಲಕುಂಟಿ-12, ರಾಜನಕೋಳೂರ-18, ಬರದೇವನಾಳ-2, ಹಗರಟಗಿ–3, ಮಾಳನೂರು–11, ಕೋಳಿಹಾಳ–4, ಅಗ್ನಿ– 5 ನಾಮಪತ್ರಗಳನ್ನು ಸಲ್ಲಿಸಲಾಗಿವೆ.

9 ಕೋವಿಡ್‌ ಪ್ರಕರಣ
ಯಾದಗಿರಿ:
ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 9 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 10,487 ಕ್ಕೆ ಏರಿಕೆಯಾಗಿದೆ.ಕೋವಿಡ್‌ನಿಂದ ಬುಧವಾರ 9 ಜನರು ಸಂಪೂರ್ಣ ಚೇತರಿಸಿಕೊಂಡಿದ್ದು, ಒಟ್ಟಾರೆ ಇಲ್ಲಿಯವರೆಗೆ 10,313 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 113 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT